Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.19ರಿಂದ ಎಸೆಸೆಲ್ಸಿ ಪರೀಕ್ಷೆ: ದ.ಕ....

ಜು.19ರಿಂದ ಎಸೆಸೆಲ್ಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳು ಸಜ್ಜು

32,636 ವಿದ್ಯಾರ್ಥಿಗಳ ಪೈಕಿ 441 ಮಂದಿ ಕೇರಳದವರು

ವಾರ್ತಾಭಾರತಿವಾರ್ತಾಭಾರತಿ18 July 2021 7:37 PM IST
share
ಜು.19ರಿಂದ ಎಸೆಸೆಲ್ಸಿ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳು ಸಜ್ಜು

ಮಂಗಳೂರು :  ಜು.19 ಮತ್ತು 22ರಂದು ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸ ಲಾಗಿದೆ. ಪರೀಕ್ಷಾ ಪೂರ್ವ ಸಿದ್ಧತೆಗಳು ಸಂಪೂರ್ಣಗೊಂಡಿದ್ದು, ಕೊರೋನ ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 29,351 ರೆಗ್ಯುಲರ್ ವಿದ್ಯಾರ್ಥಿಗಳು, 694 ಖಾಸಗಿ, 2,050 ಶಾಲಾ ಪುನರಾವರ್ತಿತ ಅಭ್ಯರ್ಥಿಗಳು, 538 ಖಾಸಗಿ ಪುನರಾವರ್ತಿತ ಸೇರಿದಂತೆ ಒಟ್ಟು 32,636 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ.

ಈಗಾಗಲೇ ಒಂಬತ್ತು ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅವರಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸೂಕ್ತ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ನಡೆಸಲಾಗುವುದು. ಕೋವಿಡ್ ಕೇರ್ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸಹಕಾರ ನೀಡಲಿದ್ದಾರೆ.

ಪರೀಕ್ಷೆ ಬರೆಯುವವರಲ್ಲಿ 441 ಮಂದಿ ಕೇರಳ ವಿದ್ಯಾರ್ಥಿಗಳಾಗಿದ್ದು, ಅವರಲ್ಲಿ 121 ಮಕ್ಕಳು ತಲಪಾಡಿ ಮೂಲಕ ಆಗಮಿಸಲಿದ್ದಾರೆ. ಅವರಿಗೆ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿದೆ. ಆದರೆ ಅವರೊಂದಿಗೆ ಬರುವ ಹೆತ್ತವರಿಗೆ ಆರ್‌ಟಿಪಿಸಿಆರ್ ವರದಿ ಕಡ್ಡಾಯಗೊಳಿಸಲಾಗಿದೆ.

ಈ ಬಾರಿ ಕೊರೋನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ವಾಸವಿರುವ ಪ್ರದೇಶದಿಂದ 4 ಕಿ.ಮೀ. ವ್ಯಾಪ್ತಿಯೊಳಗೆ ಪರೀಕ್ಷಾ ಕೇಂದ್ರ ಇರುವಂತೆ ನೋಡಿಕೊಳ್ಳಲಾಗಿದೆ. ಶೇ.50ರಷ್ಟು ವಿದ್ಯಾರ್ಥಿಗಳು ಬಸ್ ವ್ಯವಸ್ಥೆಗಾಗಿ ಬೇಡಿಕೆ ಸಲ್ಲಿಸಿದ್ದು, ಅವರಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಾರಿ ಮಕ್ಕಳ ಜತೆಗೆ ಒಎಂಆರ್ ಶೀಟ್ ಆಧಾರದಲ್ಲಿ ಪರೀಕ್ಷೆ ನಡೆಯಲಿದೆ. ಅದಕ್ಕಾಗಿ ಈಗಾಗಲೇ ಮಾದರಿ ಪರೀಕ್ಷೆಯನ್ನು ಕೂಡ ನಡೆಸ ಲಾಗಿದೆ. ಈಗಾಗಲೇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ರಾಜ್ಯವ್ಯಾಪಿ ಅಧ್ಯಾಪಕರು ವಿಚಾರಿಸಿದ್ದಾರೆ. ಕೋವಿಡ್ ಲಕ್ಷಣ ಗೋಚರಿಸಿದರೆ ಆಯಾ ವಿದ್ಯಾರ್ಥಿಯ ಮನೆಯ ಗೂಗಲ್ ಮ್ಯಾಪ್‌ನ್ನು ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆಗೆ ಕಳುಹಿಸಿಕೊಡಲಿದ್ದು, ಆ ವಿದ್ಯಾರ್ಥಿಯನ್ನು ಕರೆದೊಯ್ಯಲು ಆ್ಯಂಬುಲೆನ್ಸ್ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X