ದ.ಕ. ಜಿಲ್ಲೆ : ಕೋವಿಡ್‌ಗೆ ಆರು ಬಲಿ; 241 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಜು.18: ದ.ಕ. ಜಿಲ್ಲೆಯಲ್ಲಿ ರವಿವಾರ 241 ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಸಾವಿಗೀಡಾಗಿದ್ದಾರೆ. 199 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.3.13ರಷ್ಟಿದೆ.
ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 96,899ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 93,515 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1368 ಮಂದಿ ಮೃತಪಟ್ಟಿದ್ದರೆ, ಪ್ರಸ್ತುತ 2016 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರವಿವಾರ ಮಂಗಳೂರಿನ ಎರಡು ಕಡೆಗಳಲ್ಲಿ ಹಾಗೂ ಪುತ್ತೂರಿನ ಒಂದು ಕಡೆ ಕಂಟೈನ್‌ಮೆಂಟ್ ರೆನ್ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story





