Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜುಲೈ 19ರಿಂದ ಎಸೆಸೆಲ್ಸಿ ಪರೀಕ್ಷೆ

ಜುಲೈ 19ರಿಂದ ಎಸೆಸೆಲ್ಸಿ ಪರೀಕ್ಷೆ

ಸೋಂಕಿತ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ ನಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ18 July 2021 7:56 PM IST
share
ಜುಲೈ 19ರಿಂದ ಎಸೆಸೆಲ್ಸಿ ಪರೀಕ್ಷೆ

ಬೆಂಗಳೂರು, ಜು. 18: ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಎರಡು ದಿನಕ್ಕೆ ಸೀಮಿತಗೊಳಿಸಿ ನಡೆಯುತ್ತಿರುವ ಎಸೆಸೆಲ್ಸಿ ಪರೀಕ್ಷೆ  (ಜು.19) ಗಣಿತ, ವಿಜ್ಞಾನ ಹಾಗೂ ಸಮಾಜಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ. 

ಕೋವಿಡ್ ಮಾರ್ಗಸೂಚಿಯನ್ವಯ ಎಸೆಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆ ಪೂರ್ಣಗೊಂಡಿದ್ದು, ಕಳೆದ ಬಾರಿ 3,310 ಇದ್ದ ಪರೀಕ್ಷಾ ಕೇಂದ್ರಗಳನ್ನು 4,885ಕ್ಕೆ ಹಾಗೂ 48,000 ಪರೀಕ್ಷಾ ಕೊಠಡಿಗಳನ್ನು 73,064ಕ್ಕೆ ಹೆಚ್ಚಳ ಮಾಡಲಾಗಿದೆ. ಒಟ್ಟು 8.76ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಆದಷ್ಟು ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ. 

ರವಿವಾರ ಬಿಡದಿಯ ಸರಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಆರೋಗ್ಯ ಇಲಾಖೆ ನೀಡಿರುವ ಎಸ್‍ಒಪಿಯನ್ನು ಪಾಲಿಸಿ ಎಸೆಸೆಲ್ಸಿ ಪರೀಕ್ಷೆಯನ್ನು ಸರಳೀಕೃತ ಮಾಡಿ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಶಿಕ್ಷಣ ಇಲಾಖೆ ನಾಳೆ(ಜು.19)ಯ ಪರೀಕ್ಷೆ ನಡೆಸಲು ಪೂರ್ಣವಾಗಿ ಸಜ್ಜಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಯಾಗಬೇಕು. ಪರೀಕ್ಷಾ ನೋಂದಣಿ ಸಂಖ್ಯೆ ವಿದ್ಯಾರ್ಥಿಗಳಿಗೆ  ಗೋಚರವಾಗುವ ರೀತಿ ಪ್ರದರ್ಶನ ವಾಗಬೇಕು.  ಈ ಬಾರಿ ಪರೀಕ್ಷೆ ಒಎಮ್‍ಆರ್  ಶೀಟ್‍ನಲ್ಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾರ್ಥಿಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ಸೂಚಿಸಿದರು. 

ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ  ಕೋವಿಡ್ ಕೇರ್ ಸೆಂಟರ್‍ನಲ್ಲಿ ಪರೀಕ್ಷೆ ಬರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಜ್ವರ ಕೆಮ್ಮು ನೆಗಡಿ ಅಂತಹ ಲಕ್ಷಣ ಕಂಡುಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲೇ  ಪ್ರತ್ಯೇಕ  ಕೊಠಡಿ ವ್ಯವಸ್ಥೆ ಮಾಡಲಾಗಿದೆ  ಹಾಗೂ ಅವರಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೂ ಸಹ ಮಾಸ್ಕ್ ಕೊಡುವ ವ್ಯವಸ್ಥೆ  ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಸುರಕ್ಷಾ ಕೇಂದ್ರ: ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣ ಯಾವುದೇ ರೀತಿ ತೊಂದರೆಯಾಗದಂತೆ ಸುರಕ್ಷತೆ ನೀಡಿ ಪರೀಕ್ಷೆ ನಡೆಸಲಾಗುತ್ತದೆ. ಈ ಬಾರಿ ಪರೀಕ್ಷಾ ಕೇಂದ್ರ, ಕೊಠಡಿ ಹಾಗೂ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಮಕ್ಕಳು ಮತ್ತು ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದೆಂದು ಅವರು ಮನವಿ ಮಾಡಿದ್ದಾರೆ.

ಗ್ರಾಮೀಣ ಭಾಗದಿಂದ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಯಾವ ರೀತಿಯ ವಾಹನದ ವ್ಯವಸ್ಥೆ ಮೂಲಕ ಪರೀಕ್ಷಾ ಕೇಂದ್ರಗಳಿಗೆ ಬರಲಿದ್ದಾರೆ ಎಂಬ ಮಾಹಿತಿಯನ್ನು ಮುಖ್ಯ ಶಿಕ್ಷಕರಿಂದ ಸಂಗ್ರಹಿಸಲಾಗಿದೆ. ಬೇಕಿರುವ ಕಡೆ ಹೆಚ್ಚಿನ  ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅವಶ್ಯಕವಿದ್ದಲ್ಲಿ ಸರಕಾರಿ ವಾಹನ, ಎಸ್‍ಡಿಎಂಸಿ ಅವರ ವಾಹನ ಸಹ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಇಕ್ರಂ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನಾಳೆ(ಜು.19) ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಸಮಯವಿರುತ್ತದೆ. 

-ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೊಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರು ಮತ್ತು 40,39,38 ಬಾಲಕಿಯರು ಪರೀಕ್ಷೆ ಬರೆಯುತ್ತಾರೆ. 

-ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್, ಕುಡಿಯುವ ನೀರು, ಶೌಚಾಲಯ ಹಾಗೂ ಇನ್ನಿತರ ಮೂಲಭೂತ ವ್ಯವಸ್ಥೆ ಮಾಡಲಾಗಿದೆ.

- ಪರೀಕ್ಷಾ ಪ್ರವೇಶ ಪತ್ರ ಸಿಗಲಿಲ್ಲ ಎಂದು ಬಂದಿರುವ ದೂರುಗಳನ್ನು ಬಿಇಒ ಹಂತದಲ್ಲೇ ಪರಿಹರಿಸಲಾಗಿದೆ.

- ಮಳೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳು ಪರೀಕ್ಷಾ ಕೇಂದ್ರಗಳಿಗೆ ಬೇಗ ಆಗಮಿಸಿದರೆ ಅವರಿಗೆ ಪರೀಕ್ಷಾ ಕೇಂದ್ರದ ಒಳಗೆ  ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು.  

- ಪರೀಕ್ಷೆ ಬರೆಯಲು ಡೆಸ್ಕ್ ಗಳು ಉತ್ತಮ ವಾಗಿರುವಂತೆ ನೋಡಿಕಕೊಳ್ಳಬೇಕು.

- ವಿದ್ಯಾರ್ಥಿನಿ ಗ್ರೀಷ್ಮಾ ಎಂಬ ಬಾಲಕಿಗೆ ಸಂಬಂಧಿಸಿದಂತೆ ಇದ್ದ ದೂರಿನಲ್ಲಿ ತಾಂತ್ರಿಕಾ ಸಮಸ್ಯೆ ಇದ್ದು, ಬಾಲಕಿ 10ನೆ ತರಗತಿ ಪರೀಕ್ಷೆಗೆ ಅರ್ಜಿಯೂ ಸಲ್ಲಿಕೆಯಾಗಿರಲಿಲ್ಲ. ಬಾಲಕಿಗೆ ದೈರ್ಯ ತುಂಬಿ ಆಗಸ್ಟ್‍ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವ ವಿದ್ಯರ್ಥಿ ಎಂದು ಪರಿಗಣಿಸಿ ಪರೀಕ್ಷೆ ನೀಡಲಾಗುವುದು.

-ಹಾವೇರಿಯಲ್ಲಿ 30 ಬಾಲಕರು ಪರೀಕ್ಷಾ ಶುಲ್ಕ ಪಾವತಿಸಿದ್ದು, ಶಿಕ್ಷಕ ದುರುಪಯೋಗ ಪಡಿಸಿಕೊಂಡಿರುತ್ತಾರೆ. ಶಿಕ್ಷಕನನ್ನು ಅಮಾನತ್ತು ಮಾಡಿ, ಆಗಸ್ಟ್ ನಲ್ಲಿ ನಡೆಯುವ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X