Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕ್ಷೇತ್ರದಲ್ಲಿ ಶಕ್ತಿಹೀನರಾಗಿದ್ದೇವೆ’:...

‘ಕ್ಷೇತ್ರದಲ್ಲಿ ಶಕ್ತಿಹೀನರಾಗಿದ್ದೇವೆ’: ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಮರುಸ್ಥಾಪನೆಗೆ ಸರಕಾರಕ್ಕೆ ಸಂಸದರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 July 2021 12:12 AM IST
share

ಹೊಸದಿಲ್ಲಿ,ಜು.18: ಕೋವಿಡ್ ಬಿಕ್ಕಟ್ಟು ನಿರ್ವಹಣೆಗೆ ಹಣದ ಬಳಕೆಗಾಗಿ ಎರಡು ವರ್ಷಗಳ ಅವಧಿಗಾಗಿ ಕಳೆದ ವರ್ಷ ಸ್ಥಗಿತಗೊಳಿಸಲ್ಪಟ್ಟಿರುವ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (ಎಂಪಿಎಲ್ಎಡಿಎಸ್)ಯನ್ನು ಪುನರಾರಂಭಿಸುವಂತೆ ಮಳೆಗಾಲದ ಅಧಿವೇಶನದ ಮುನ್ನಾದಿನವಾದ ರವಿವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಸತ್ ಸದಸ್ಯರು ಆಗ್ರಹಿಸಿದರು.

ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಲ್ಲದೆ ತಾವು ತಮ್ಮ ಸ್ವಂತ ಕ್ಷೇತ್ರದಲ್ಲಿ ಶಕ್ತಿಹೀನ ಮತ್ತು ಅಸಹಾಯಕರಾಗಿದ್ದೇವೆ ಎಂದು ಸಂಸದರು ತಿಳಿಸಿದರು. 

ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೈಗೆತ್ತಿಕೊಳ್ಳಲು ಒಪ್ಪಿದ ಸ್ಪೀಕರ್,ಯೋಜನೆಯ ಪುನರಾರಂಭಕ್ಕೆ ಸಮಯಾವಕಾಶ ಅಗತ್ಯವಿದೆ ಎಂದು ಹೇಳಿದರು.
ಆಧಿರ ರಂಜನ ಚೌಧುರಿ(ಕಾಂಗ್ರೆಸ್), ಸುದೀಪ್ ಬಂದೋಪಾಧ್ಯಾಯ(ಟಿಎಂಸಿ), ಟಿ.ಆರ್.ಬಾಲು(ಡಿಎಂಕೆ), ರಾಖಿ ಮಿಶ್ರಾ(ಬಿಜೆಡಿ),ರಿತೇಶ ಪಾಂಡೆ(ಬಿಎಸ್ಪಿ) ಮತ್ತು ಮಧು ರೆಡ್ಡಿ(ವೈಎಸ್ಆರ್ ಕಾಂಗ್ರೆಸ್) ಸೇರಿದಂತೆ ಸದನ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.
 ‌
ಮಳೆಗಾಲದ ಅಧಿವೇಶನಕ್ಕಾಗಿ ಸರಕಾರವು ಅತಿಯಾದ ಸಂಖ್ಯೆಯಲ್ಲಿ ಮಸೂದೆಗಳನ್ನು ಪಟ್ಟಿ ಮಾಡಿರುವುದರಿಂದ ತುರ್ತು ಸಾರ್ವಜನಿಕ ವಿಷಯಗಳ ಚರ್ಚೆಗೆ ತಮಗೆ ಸಾಕಷ್ಟು ಸಮಯಾವಕಾಶ ದೊರೆಯುವುದಿಲ್ಲವೆಂದೂ ಸದಸ್ಯರು ತಿಳಿಸಿದರು. ಪ್ರತಿಯೊಂದೂ ಪಕ್ಷವು ತಾನು ಬಯಸಿದ ವಿಷಯವನ್ನು ಪ್ರಸ್ತಾವಿಸಲು ಸಾಕಷ್ಟು ಅವಕಾಶ ದೊರೆಯುವಂತೆ ತಾನು ನೀಡುಕೊಳ್ಳುವುದಾಗಿ ಸ್ಪೀಕರ್ ನಾಯಕರಿಗೆ ಭರವಸೆ ನೀಡಿದರು. ಸಭೆಯ ಅಂತ್ಯದಲ್ಲಿ ನಾಯಕರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ ಪ್ರಧಾನಿ,ಸಂಸತ್ ಅಧಿವೇಶನವನ್ನು ಫಲಪ್ರದವಾಗಿಸಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಹೇಳಿದರು.

ಸಂಸತ್ತಿನ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭಗೊಳ್ಳಲಿದೆ. ರವಿವಾರ ಸರಕಾರವು ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರತಿಪಕ್ಷ ನಾಯಕರು ಕೃಷಿ ಮಸೂದೆಗಳು,ಬೆಲೆ ಏರಿಕೆ(ವಿಶೇಷವಾಗಿ ಪೆಟ್ರೋಲ್ ಮತ್ತು ಡೀಸೆಲ್) ಯಂತಹ ಪ್ರಮುಖ ವಿಷಯಗಳನ್ನು ಎತ್ತಿದರಲ್ಲದೆ,ನೀಟ್ನಲ್ಲಿ ಒಬಿಸಿಗಳಿಗೆ ಮೀಸಲಾತಿ ಕಲ್ಪಿಸುವಂತೆಯೂ ಆಗ್ರಹಿಸಿದರು.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X