ಉಡುಪಿ: ಸಾಂಗವಾಗಿ ನಡೆದ ಮೊದಲ ದಿನದ ಎಸೆಸೆಲ್ಸಿ ಪರೀಕ್ಷೆಗಳು

ಉಡುಪಿ, ಜು.19: ಕೊರೋನ ಆತಂಕದ ನಡುವೆ ಸೂಕ್ತ ಮುಂಜಾಗ್ರತಾ ಕ್ರಮಗನ್ನು ಅನುಸರಿಸಿ ಬದಲಾದ ಪರೀಕ್ಷಾ ವಿಧಾನದೊಂದಿಗೆ 2021ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಗಳು ಇಂದು ಜಿಲ್ಲೆಯ 77 ಪರೀಕ್ಷಾ ಕೇಂದ್ರಗಳಲ್ಲಿ ಯಾವೊಂದು ಅಹಿತಕರ ಘಟನೆಗಳಿಲ್ಲದೇ ಸಾಂಗವಾಗಿ ನಡೆದವು ಎಂದು ಡಿಡಿಪಿಐ ಎನ್.ಎಚ್.ನಾಗೂರ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ 77 ಕೇಂದ್ರಗಳು ರೆಗ್ಯುಲರ್ ವಿದ್ಯಾರ್ಥಿಗಳು, ಮರುಪರೀಕ್ಷೆ ತೆಗೆದುಕೊಳ್ಳುವವರು ಹಾಗೂ ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು 13931 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲು ಹೆಸರು ನೊಂದಾಯಿ ಸಿಕೊಂಡಿದ್ದಾರೆ. ಇವರಲ್ಲಿ 12881 ಮಂದಿ ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದಾರೆ.
ದಿನದಲ್ಲಿ ಬೆಳಗ್ಗೆ 10:30ರಿಂದ ಅಪರಾಹ್ನ 1:30ರವರೆಗೆ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ನಡೆದವು.
ಡಿಸಿ, ಸಿಇಓ ಭೇಟಿ: ಬೆಳಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಡಿಡಿಪಿಐ ಎನ್.ಎಚ್.ನಾಗೂರ ಅವರು ಹಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು. ಉಡುಪಿಯ ಬೋರ್ಡ್ ಹೈಸ್ಕೂಲ್, ಬಾಲಕಿಯರ ಪಿಯು ಕಾಲೇಜು ಹಾಗೂ ಕಟಪಾಡಿ ಎಸ್.ವಿ.ಪ್ರೌಢ ಶಾಲಾ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಅಲ್ಲಿನ ವ್ಯವಸ್ಥೆ, ಸೌಲಭ್ಯಗಳನ್ನು ಪರಿಶೀಲಿಸಿದರು.
ಇವರೊಂದಿಗೆ ಮಂಗಳೂರು ಸಿಇಟಿ ಸಹ ನಿರ್ದೇಶಕ ಸಿಪ್ರಿಯಾನ್ ಮೆಂತೆರೊ, ಉಡುಪಿ ಬಿಇಓ ಎ.ಕೆ.ನಾಗೇಂದ್ರಪ್ಪ ಉಪಸ್ಥಿತರಿದ್ದರು.







.jpeg)

.jpeg)


