ಎರ್ಮಾಳು: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ನವಿಲು; ಸವಾರ ಮೃತ್ಯು

ಪಡುಬಿದ್ರಿ: ತೆಂಕ ಎರ್ಮಾಳು ಗರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನವಿಲೊಂದಕ್ಕೆ ಸ್ಕೂಟರ್ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸ್ಕೂಟರ್ ಸವಾರ ರಸ್ತೆಯಂಚಿನ ಕಲ್ಲೊಂದಕ್ಕೆ ಬಿದ್ದ ಕಾರಣ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಮೃತ ಯುವಕನನ್ನು ಬೆಳಪು ಪ್ರಸಾದ ನಗರ ನಿವಾಸಿ ಅಬ್ದುಲ್ (25) ಎಂದು ಗುರುತಿಸಲಾಗಿದೆ. ಪಡುಬಿದ್ರಿ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಈತ ಪಡುಬಿದ್ರಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕೂಟರ್ ಸವಾರಿ ಮಾಡಿಕೊಂಡು ಉಚ್ಚಿಲ ಕಡೆಗೆ ತೆರಳುತಿದ್ದ. ಈ ವೇಳೆ ನವಿಲೊಂದು ಹಾರಿಕೊಂಡು ಬಂದು ಢಿಕ್ಕಿಯಾಗಿದೆ ಎನ್ನಲಾಗಿದೆ.
ನವಿಲು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಬ್ದುಲ್ ಗಂಭೀರ ಗಾಯಗೊಂಡಿದ್ದರು. ಆ್ಯಂಬುಲೆನ್ಸ್ ಬರಲು ವಿಳಂಬವಾದ ಹಿನ್ನೆಲೆ ಸ್ಥಳೀಯ ಕಾರ್ತಿಕ್ ಎಂಬ ಯುವಕ ತನ್ನ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿದ್ದು, ಈ ವೇಳೆ ಯುವಕ ಮೃತಪಟ್ಟಿದ್ದನು ಎಂದು ತಿಳಿದು ಬಂದಿದೆ.
ಈ ಸಂಬಂಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





