ದ.ಕ. ಜಿಲ್ಲೆಯಲ್ಲಿ ಸೋಮವಾರ ಕೋವಿಡ್‌ಗೆ ನಾಲ್ವರು ಬಲಿ; 126 ಮಂದಿಗೆ ಸೋಂಕು

ಮಂಗಳೂರು, ಜು.19: ದ.ಕ. ಜಿಲ್ಲೆಯಲ್ಲಿ ಸೋಮವಾರ 126 ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. 208 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಜಿಲ್ಲೆಯ ಪಾಸಿಟಿವಿಟಿ ದರ ಶೇ.2.49ರಷ್ಟಿದೆ.
ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 97,025ಕ್ಕೆ ಏರಿಕೆಯಾಗಿದ್ದು, ಅವರಲ್ಲಿ 93,723 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,372 ಮಂದಿ ಮೃತಪಟ್ಟಿದ್ದರೆ, ಪ್ರಸ್ತುತ 1,930 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story





