ಅಕ್ರಮ ಜಾನುವಾರು ಸಾಗಾಟ ಆರೋಪ; ಇಬ್ಬರು ಆರೋಪಿಗಳ ಬಂಧನ

ಭಟ್ಕಳ: ಅಕ್ರಮವಾಗಿ ಎರಡು ಕೋಣಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ನಗರ ಠಾಣೆಯ ಪೊಲೀಸರು ಇಬ್ಬರು ಸಹೋದರರನ್ನು ಬಂಧಿಸಿದ ಘಟನೆ ಸೋಮವಾರ ನಡೆದಿದೆ.
ಬಂಧಿತ ಆರೋಪಿಗಳನ್ನು ಮಾದೇವ ಮಾಸ್ತಪ್ಪ ನಾಯ್ಕ ಹಾಗೂ ಕೃಷ್ಣ ಮಾಸ್ತಪ್ಪ ನಾಯ್ಕ ಎಂದು ಗುರುತಿಸಲಾಗಿದೆ.
ಆರೋಪಿಗಳು ವದೆ ಮಾಡುವ ಉದ್ದೇಶದಿಂದ 40 ಸಾವಿರ ಮೌಲ್ಯದ ಎರಡು ಕೋಣಗಳನ್ನು ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮುಟ್ಟಳ್ಳಿ ಕಡೆಯಿಂದ ಮುಟ್ಟಳ್ಳಿ ಬೈಪಾಸ್ ಕಡೆಗೆ ಯಾವುದೇ ಅನುಮತಿ ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿಯ ಮೆರೆಗೆ ಎರಡು ಕೋಣಗಳ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Next Story





