ಆಸ್ಕರ್ ಗುಣಮುಖರಾಗಲು ಪ್ರಾರ್ಥಿಸಿ: ಅಶೋಕ್ ಕುಮಾರ್ ಕೊಡವೂರು
ಉಡುಪಿ, ಜು.21: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾಗಿರುವ ಆಸ್ಕರ್ ಫೆರ್ನಾಂಡೀಸ್ ಅವರು ಅನಾರೋಗ್ಯದಿಂದ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದಾರೆ. ಅವರ ದೈಹಿಕ ಆರೋಗ್ಯ ಸ್ಥಿರವಾಗಿದ್ದರೂ, ಗಂಭೀರವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ತಿಳಿಸಿದ್ದಾರೆ.
ಆಸ್ಕರ್ ಅವರ ಆರೋಗ್ಯ ಸುಧಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿ ಪಕ್ಷದ ಎಲ್ಲಾ ಧರ್ಮಗಳ ಕಾರ್ಯಕರ್ತರು, ಅಭಿಮಾನಿಗಳು ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥಿಸಬೇಕೆಂಬುದು ಜಿಲ್ಲಾ ಕಾಂಗ್ರೆಸ್ ಮನವಿ ಮಾಡುತ್ತದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





