ದ.ಕ. ಜಿಲ್ಲೆ : ಕೋವಿಡ್ ಗೆ 6 ಮಂದಿ ಬಲಿ, 190 ಮಂದಿ ಕೊರೋನ ಪಾಸಿಟಿವ್
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 190 ಮಂದಿಯಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. 140 ಮಂದಿ ಗುಣಮುಖರಾಗಿದ್ದು ದ.ಕ. ಜಿಲ್ಲೆಯಲ್ಲಿ ಬುಧವಾರ ಆರು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಶೇ. 2.40 ಪಾಸಿಟಿವಿಟಿ ದರ ದಾಖಲಾಗಿದೆ. ಜಿಲ್ಲೆಯಲ್ಲಿ ಈಗ 1926 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಗೆ ಇದುವರೆಗೆ 1381 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 81353 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 9908817ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.
Next Story