Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜು.26ರಿಂದ ಪದವಿ ಕಾಲೇಜ್ ಆರಂಭ: ಈವರೆಗೆ...

ಜು.26ರಿಂದ ಪದವಿ ಕಾಲೇಜ್ ಆರಂಭ: ಈವರೆಗೆ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ; ಉಪ ಮಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ21 July 2021 10:45 PM IST
share
ಜು.26ರಿಂದ ಪದವಿ ಕಾಲೇಜ್ ಆರಂಭ: ಈವರೆಗೆ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ; ಉಪ ಮಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಜು. 21: `ಈ ತಿಂಗಳ 26ರಿಂದ ರಾಜ್ಯದಲ್ಲಿ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ' ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆಗಿರುವ ಉಪ ಮಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಬುಧವಾರ `ಟೊಕಿಯೋ ಒಲಿಂಪಿಕ್-2020' ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಶುಭಕೋರುವ ವರ್ಚುಯಲ್ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರಕಾರಿ-ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗುತ್ತಿದೆ. ಜತೆಗೆ, ಬೋಧಕರು, ಬೋಧಕೇತರ ಸಿಬ್ಬಂದಿಗೂ ವ್ಯಾಕ್ಸಿನ್ ನೀಡಲಾಗುತ್ತಿದೆ' ಎಂದು ತಿಳಿಸಿದರು. 

`ಲಭ್ಯವಿರುವ, ಲಭ್ಯವಾಗುತ್ತಿರುವ ಲಸಿಕೆಯನ್ನು ನ್ಯಾಯೋಚಿತವಾಗಿ ಎಲ್ಲರಿಗೂ ಹಂಚಿ ನೀಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು, ಭೌತಿಕ ತರಗತಿಗಳಿಗೆ ಹಾಜರಾಗ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್ ಲಸಿಕೆ ಪಡೆದಿರಲೇಬೇಕು' ಎಂದು ಅವರು ಇದೇ ವೇಳೆ ಸಲಹೆ ನೀಡಿದರು. 

ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ: `ಕೋವಿಡ್ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ನಡುವೆ ಡಿಜಿಟಲ್ ಅಂತರ ಅಳಿಸಿ ಹಾಕುವ ಉದ್ದೇಶದಿಂದ ಕಲಿಕಾ ನಿರ್ವಹಣಾ ವ್ಯವಸ್ಥೆ (ಎಲ್‍ಎಂಎಸ್) ಯನ್ನು ಜಾರಿಗೆ ತರಲಾಗಿದೆ. ಅದನ್ನು ಕಲಿಯಲು ಲ್ಯಾಪ್‍ಟಾಪ್ ಮತ್ತು ಟ್ಯಾಬ್ಲೆಟ್ ಪಿಸಿಗಳನ್ನು ವಿದ್ಯಾರ್ಥಿಗಳಿಗೆ ಕೊಡಲಾಗಿದೆ' ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X