Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಯಕತ್ವ ಬದಲಾವಣೆ ವಿಚಾರ: ಸಿಎಂ...

ನಾಯಕತ್ವ ಬದಲಾವಣೆ ವಿಚಾರ: ಸಿಎಂ ಬಿಎಸ್‌ವೈ ಬೆಂಬಲಕ್ಕೆ ನಿಂತ ಮಲೆನಾಡು ವೀರಶೈವ ಮಠಾದೀಶರ ಪರಿಷತ್

ವಾರ್ತಾಭಾರತಿವಾರ್ತಾಭಾರತಿ21 July 2021 11:14 PM IST
share
ನಾಯಕತ್ವ ಬದಲಾವಣೆ ವಿಚಾರ: ಸಿಎಂ ಬಿಎಸ್‌ವೈ ಬೆಂಬಲಕ್ಕೆ ನಿಂತ ಮಲೆನಾಡು ವೀರಶೈವ  ಮಠಾದೀಶರ ಪರಿಷತ್

ಶಿವಮೊಗ್ಗಜು.21: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ವಿಚಾರಕ್ಕೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮಲೆನಾಡು ವೀರಶೈವ  ಮಠಾದೀಶರ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

ನಗರದ ಬೆಕ್ಕಿನಕಲ್ಮಠದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಮಲೆನಾಡು ವೀರಶೈವ  ಮಠಾದೀಶರು,ಬಿಜೆಪಿ ಹೈಕಮಾಂಡ್ ವಿರುದ್ದ ಗುಡುಗಿದೆ.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಯೋಗಾಯೋಗ.ರಾಜ್ಯದ ಅಭಿವೃದ್ದಿಗಾಗಿ ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು ಎಂದು ಬೇಡಿಕೆ ಇಟ್ಟಿದೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮಲೆನಾಡು ವೀರಶೈವ ಮಠಾಧೀಶರ ಪರಿಷತ್ ಅಧ್ಯಕ್ಷರಾದ, ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ.ರಾಜ್ಯದ ಅಭಿವೃದ್ಧಿಯೇ ಗುರಿ ಎಂದು ಕೆಲಸ ಮಾಡುತ್ತಿದ್ದಾರೆ.ಯಡಿಯೂರಪ್ಪ ಉಪಮುಖ್ಯಮಂತ್ರಿಯಾದಾಗಲೇ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಗೆ ಅಡಿಗಲ್ಲು ಹಾಕಿದರು.ಯಡಿಯೂರಪ್ಪ ಅವರಿಗೆ ಅಭಿವೃದ್ಧಿ ಬಗ್ಗೆ ಇರುವ ಕಮಿಟ್ ಮೆಂಟ್ ಬೇರೆ ರಾಜಕಾರಣಗಳಲ್ಲಿ ಕಾಣಲು ಸಾಧ್ಯವಿಲ್ಲ ಎಂದು ಹೇಳಿದರು.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಿನಾಕಾರಣ ಅಧಿಕಾರದಿಂದ ಕೆಳಗಿಸಲಾಗಿತ್ತಿದೆ.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ.ಆರೋಗ್ಯ ಸರಿ ಇಲ್ಲ ಎಂದು ಅಧಿಕಾರದಿಂದ ಕೆಳಗಿಳಿಸುತ್ತಾರೆಯೇ ಎಂದು  ಪ್ರಶ್ನಿಸಿದ ಸ್ವಾಮೀಜಿ,ಗೋವಾ ಸಿಎಂ ಮನೋಹರ್ ಪರಿಕ್ಕರ್ ಸಾಯುವವರೆಗೆ ಅಧಿಕಾರ ನಡೆಸಿದ್ದರು.ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ ಎನ್ನುವುದಾದರೆ ಇನ್ನೂ ಯಡಿಯೂರಪ್ಪ ಅವರಲ್ಲಿ ಉತ್ಸಾಹ ಕುಗ್ಗಿಲ್ಲ. ಯಡಿಯೂರಪ್ಪ ಅವರಿಗೆ ಇನ್ನೂ ಎರಡು ವರ್ಷ ಅಧಿಕಾರ ಪೂರೈಸಲು ಬಿಟ್ಟರೆ ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ ಎಂದರು.

ಯಡಿಯೂರಪ್ಪ ಅವರು ವೀರಶೈವ ಎಂಬ ಕಾರಣಕ್ಕೆ ಸ್ವಾಮೀಜಿಗಳು ಬೆಂಬಲಿಸುತ್ತಿಲ್ಲ.ಬದಲಿಗೆ ಯಡಿಯೂರಪ್ಪ ಅವರು ಕೆಲಸಗಾರ ಎಂದು ಬೆಂಬಲಿಸುತ್ತಿದ್ದೇವೆ.ಸಾಮಾನ್ಯ ವ್ಯಕ್ತಿಯೂ ಯಡಿಯೂರಪ್ಪ ಅವರನ್ನು ಬೆಂಬಲಿಸುತ್ತಿದ್ದಾರೆ. ಮಠಾದೀಶರು ರಾಜಕೀಯ ಹಸ್ತಕ್ಷೇಪ ಮಾಡುತ್ತಿದ್ದಾರೆ  ಎಂಬ ಮನೋಭಾವ ಬೇಡ.ಯಡಿಯೂರಪ್ಪ ಅವರ ಕನಸು ನನಸಾಗಲು ಅವಕಾಶ ಮಾಡಿಕೊಡಿ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಟಿಯಲ್ಲಿ ತೊಗರ್ಸಿ ಪಂಚವಣ್ಣಿಗೆ ಮಠದ ಶ್ರೀ ಷ.ಬ್ರ ಚನ್ನವೀರದೇಶಿ ಕೇಂದ್ರ ಸ್ವಾಮೀಜಿ,ಬಳ್ಳಿಗಾವಿಯ ಗೇರುಕೊಪ್ಪ ಮಠದ ಶ್ರೀ ಮ.ನಿ.ಪ್ರ ಶಿವಲಿಂಗೇಶ್ವರ ಮಹಾಸ್ವಾಮೀಜಿ,ಕಕೇನಂದಿಹಳ್ಳಿಯ ದುಗ್ಲಿ ಮಠದ ಶ್ರೀ ಷ.ಬ್ರ ರೇವಣ್ಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ,ಜಡೆ ಮಠದ ಮ.ನಿ.ಪ್ರ ಡಾ.ಮಹಾಂತ ಸ್ವಾಮೀಜಿ,ಶಿರಾಳಕೊಪ್ಪದ ವಿರಕ್ತ ಮಠದ ಮ.ನಿ.ಪ್ರ ಸಿದ್ದೇಶ್ವರ ಸ್ವಾಮೀಜಿ,ತಾಳಗುಪ್ಪದ ಶ್ರಿ ಮ.ನಿ.ಪ್ರ ಸಿದ್ದೇಶ್ವರ ಮಹಾಸ್ವಾಮೀಜಿ,ಮೂಡಿ ಮಠದ ಮ.ನಿ.ಪ್ರ ಸದಾಶಿವಸ್ವಾಮೀಜಿ,ಹಿರೇಮಾಗಡಿ ಮಠದ ಮ.ನಿ.ಪ್ರ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ,ತೊಗರ್ಸಿಯ ತ್ಯಾತನೂರು ಹಿರೇಮಠದ ಷ.ಬ್ರ ಗುರುಬಸವ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ,ಕೋಣಂದೂರು ಮಠದ ಷ.ಬ್ರ ಪಂಡಿತಾರಾಧ್ಯ ಶಿವಚಾರ್ಯ ಸ್ವಾಮೀಜಿ,ಶಾಂತಪುರದ ಷ.ಬ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ,ಮೂಲೆಗದ್ದೆ ಮಠದ ಮ.ನಿ.ಪ್ರ ಅಭಿನವ ಚನ್ನಬಸವ ಸ್ವಾಮೀಜಿ,ತೊಗರ್ಸಿಯ ಷ.ಬ್ರ.ಮಹಾಂತ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ,ಲಕ್ಕೊಳ್ಳಿ ಸ್ವಪ್ತ ಶ್ರೀ ವೃಷಭ ಸೇನಭತ್ಯಾರಕ ಸ್ವಾಮೀಜಿ,ಹಾರನಹಳ್ಳಿಯ ರಾ.ಲಿಂಗೇಶ್ವರ ಮಠದ ಷ.ಬ್ರ ವಿಶ್ವರಾಧ್ಯ ಶಿವಾಚಾರ್ಯ ಸ್ವಾಮೀಜಿ,ಜಡೆ ಹಿರೇಮಠದ ಷ.ಬ್ರ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ,ಹಾರನಹಳ್ಳಿ ಚೌಕಿಮಠದ ಮ.ನಿ.ಪ್ರ ನೀಲಕಂಠ ಸ್ವಾಮೀಜಿ,ಅರಕೆರೆಯ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿ,ಬಸವಕೇಂದ್ರದ ಶ್ರೀ ಮ,ನಿ.ಪ್ರ ಬಸವಮರುಳ ಸಿದ್ದ ಸ್ವಾಮೀಜಿ,ಶಿಕಾರಿಪುರ ವಿರಕ್ತಮಠದ ಶ್ರೀ,ಮ.ನಿ.ಪ್ರ ಚನ್ನಬಸವ ಸ್ವಾಮೀಜಿ  ಉಪಸ್ಥಿತರರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X