ಇಂದು ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ

ಮಂಗಳೂರು, ಜು. 22: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು (ಜು.22) ಮಂಗಳೂರಿಗೆ ಆಗಮಿಸಲಿದ್ದಾರೆ.
ಇಂದು ಸಂಜೆ 5:10ಕ್ಕೆ ಬೆಂಗಳೂರಿನಿಂದ ಹೊರಡುವ ಅವರು 6:10ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪುವರು. ಬಳಿಕ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಗರದಲ್ಲಿ ವಾಸ್ತವ್ಯ ಹೂಡುವರು.
ಜು.23ರಂದು ಪೂ.11:30ಕ್ಕೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಧ್ಯಾಹ್ನ 12:30ಕ್ಕೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





