Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ...

ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನಕ್ಕೆ ಅಗತ್ಯ ಸುಧಾರಣೆ: ಸಚಿವ ಜಗದೀಶ್‌ ಶೆಟ್ಟರ್‌

ವಾರ್ತಾಭಾರತಿವಾರ್ತಾಭಾರತಿ22 July 2021 4:22 PM IST
share
ಕೈಗಾರಿಕಾ ಸ್ನೇಹಿ ಆಸ್ತಿ ತೆರಿಗೆ ಅನುಷ್ಠಾನಕ್ಕೆ ಅಗತ್ಯ ಸುಧಾರಣೆ: ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಇಂದು ವಿಧಾನಸೌಧದಲ್ಲಿ ಪೌರಾಡಳಿತ ಸಚಿವರಾದ ಎಂ ಟಿ ಬಿ ನಾಗರಾಜ್‌, ನಗರಾಭಿವೃದ್ದಿ ಸಚಿವರಾದ ಬಿ ಎ ಬಸವರಾಜ್‌ ಹಾಗೂ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯದ ಕೈಗಾರಿಕಾ ಸಂಸ್ಥೆ ಗಳ ಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಲಾಯಿತು. 

ಸಭೆಯಲ್ಲಿ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಸಮಸ್ಯೆಗಳನ್ನು ತಿಳಿಸಿದರು. ನಂತರ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಮಾತನಾಡಿ, ಕೈಗಾರಿಕೆಗಳ ಮೇಲೆ ಹಾಕಲಾಗುತ್ತಿರುವ ತೆರಿಗೆಗಳು ಬಹಳ ಹೆಚ್ಚಾಗಿವೆ. ಖಾಲಿ ಇರುವ ಜಾಗದ ಮೇಲೂ ಬಹಳಷ್ಟು ತೆರಿಗೆ ಹಾಕಲಾಗುತ್ತಿದೆ. ಅಲ್ಲದೆ, ತೆರಿಗೆ ಪದ್ದತಿಯಲ್ಲಿ ರಾಜ್ಯಾದ್ಯಂತ ಪಾರದರ್ಶಕ ಹಾಗೂ ಒಂದೇ ರೀತಿಯ ತೆರಿಗೆ ಪದ್ದತಿ ಅಳಡಿಸಿಕೊಳ್ಳುವುದು ಬಹಳ ಅವಶ್ಯಕ. ಈ ಹಿನ್ನಲೆಯಲ್ಲಿ ಇಂದು ಮೂರು ಸಚಿವರ ಉಪಸ್ಥಿತಿಯಲ್ಲಿ ಸಭೆಯನ್ನ ನಡೆಸಲಾಯಿತು. ಈ ಸಭೆಯಲ್ಲಿ ಎಲ್ಲಾ ಸಮಸ್ಯೆಗಳ ಬಗ್ಗೆಯೂ ಶೀಘ್ರವಾಗಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಪದ್ದತಿಯ ಅನುಷ್ಠಾನಕ್ಕೆ ಅಗತ್ಯವಿರುವ ಸುಧಾರಣೆಗಳನ್ನು ಶೀಘ್ರ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು.

ಮುಂದಿನ ವಾರ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆಯ ಆಯುಕ್ತರುಗಳನ್ನು ಒಳಗೊಂಡ ಸಭೆಯನ್ನು ಆಯೋಜಿಸಬೇಕು. ಆ ಸಭೆಯಲ್ಲಿ ರಾಜ್ಯಾದ್ಯಂತ ಕೈಗಾರಿಕೆಗಳಿಂದ ಬಾಕಿ ಇರುವ ತೆರಿಗೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು, ಒಂದು ಬಾರಿಯ ವಿಶೇಷ ಯೋಜನೆಯನ್ನು ಘೋಷಿಸುವಂತಹ ನಿರ್ಧಾರಗಳನ್ನು ತಗೆದುಕೊಳ್ಳುವಂತೆ ಸಚಿವ ಜಗದೀಶ್‌ ಶೆಟ್ಟರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಾಭಿವೃದ್ದಿ ಸಚಿವರಾದ ಬಿ ಎ ಬಸವರಾಜ್‌, ಪೌರಾಡಳಿತ ಸಚಿವರಾದ ಎಂ.ಟಿ.ಬಿ ನಾಗರಾಜ್‌ ಮಾತನಾಡಿದರು. ಎಫ್‌ಕೆಸಿಸಿಐ ಅಧ್ಯಕ್ಷ ಪೆರಿಕಾಲ್‌ ಎಂ ಸುಂದರ್‌ ತೆರಿಗೆ ಸುಧಾರಣೆಯಲ್ಲಿ ಗಮನಿಸಬೇಕಾದ ಅಂಶಗಳ ಬಗ್ಗೆ ಸಚಿವರುಗಳಿಗೆ ಮನವಿಯನ್ನು ಸಲ್ಲಿಸಿದರು.

ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ರಾಜ್‌ ಕುಮಾರ್‌ ಖತ್ರಿ, ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌, ನಿರ್ದೇಶಕಿ ಕಾವೇರಿ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್‌ ಕೃಷ್ಣ, ಕೆಐಎಡಿಬಿ ಸಿಇಓ ಡಾ ಎನ್‌ ಶಿವಶಂಕರ್‌, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಎಫ್‌ಕೆಸಿಸಿಐ ಅಧ್ಯಕ್ಷ ಪೆರಿಕಾಲ್‌ ಎಂ ಸುಂದರ್‌, ಹಿರಿಯ ಉಪಾಧ್ಯಕ್ಷ ಡಾ. ಐ.ಎಸ್‌ ಪ್ರಸಾದ್‌ ಸೇರಿದಂತೆ ರಾಜ್ಯದ ವಿವಿಧ ಬಾಗಗಳಿಂದ ಆಗಮಿಸಿದ್ದ ಎಫ್‌ಕೆಸಿಸಿಐ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X