ಹೈಕಮಾಂಡ್ ಸೂಚನೆ ನೀಡುವವರೆಗೂ ಮುಖ್ಯಮಂತ್ರಿಯಾಗಿರುತ್ತೇನೆ: ಸಿಎಂ ಯಡಿಯೂರಪ್ಪ

ಬೆಂಗಳೂರು, ಜು. 22: `ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡುವೆ ಎಂದು ಹೇಳಿದ್ದೆ. ಹೈಕಮಾಂಡ್ ಸೂಚನೆ ನೀಡುವವರೆಗೂ ಮುಖ್ಯಮಂತ್ರಿಯಾಗಿರುತ್ತೇನೆ. ಅವರ ರಾಜೀನಾಮೆ ನೀಡಿ ಎಂದರೆ ಆ ಪ್ರಕಾರವೇ ನಡೆದುಕೊಳ್ಳುತ್ತೇನೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಗುರುವಾರ ಇಲ್ಲಿನ ಕಾಚರಕನಹಳ್ಳಿಯಲ್ಲಿ ಸಮಾರಂಭವೊಂದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಜು.25ಕ್ಕೆ ವರಿಷ್ಠರ ಸಂದೇಶ ಬರಲಿದ್ದು, ಆ ಪ್ರಕಾರವೇ ನಡೆದು ಕೊಳ್ಳುತ್ತೇನೆ. ಯಡಿಯೂರಪ್ಪನವರೇ ನೀವು ಬೇಡ ಎಂದರೆ ಕೂಡಲೇ ರಾಜೀನಾಮೆ ನೀಡುತ್ತೇನೆ' ಎಂದು ಇದೇ ವೇಳೆ ತಿಳಿಸಿದರು.
`ರಾಜೀನಾಮೆ ಬಳಿಕ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದರ ಜತೆಗೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುತ್ತೇನೆ. ಮುಂದಿನ ಮುಖ್ಯಮಂತ್ರಿ ಯಾರು ಆಗಬೇಕು ಎಂಬ ಬಗ್ಗೆ ಯಾರ ಹೆಸರೂ ಶಿಫಾರಸು ಮಾಡುವುದಿಲ್ಲ. ಅದರ ಅಗತ್ಯವೂ ಇಲ್ಲ. ಕೇಳಿದರೂ ಯಾರ ಹೆಸರನ್ನೂ ಹೇಳುವುದಿಲ್ಲ' ಎಂದು ಯಡಿಯೂರಪ್ಪ ತಿಳಿಸಿದರು.
Next Story





