Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತರು ಜನರ ಸಮಸ್ಯೆಗಳಿಗೆ...

ಪತ್ರಕರ್ತರು ಜನರ ಸಮಸ್ಯೆಗಳಿಗೆ ಧ್ವನಿಯಾಗಲಿ: ಋಷಿಕೇಶ್ ಸೋನಾವಣೆ

ವಾರ್ತಾಭಾರತಿವಾರ್ತಾಭಾರತಿ22 July 2021 6:06 PM IST
share
ಪತ್ರಕರ್ತರು ಜನರ ಸಮಸ್ಯೆಗಳಿಗೆ ಧ್ವನಿಯಾಗಲಿ: ಋಷಿಕೇಶ್ ಸೋನಾವಣೆ

ಮಂಗಳೂರು, ಜು. 22: ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಪತ್ರಕರ್ತರು ಸಮಾಜದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದಾಗ ಅದಕ್ಕೆ ಪೂರಕವಾಗಿ ಇಲಾಖೆಯಿಂದಲೂ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅಭಿಪ್ರಾಯಿಸಿದ್ದಾರೆ.

ಅವರು ಇಂದು ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ನ ಸಹಕಾರದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಧನಾತ್ಮಕ ಪ್ರತಿಕ್ರಿಯೆಯ ಕಾರ್ಯವಿಧಾನ ಸಮಾಜದಲ್ಲಿ ಅಭಿವೃದ್ಧಿಯ ದಿಕ್ಕಿನಲ್ಲಿ ಅತೀ ಅಗತ್ಯವಾಗಿದ್ದು, ಪತ್ರಕರ್ತರು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭ ಕನ್ನಡ ಪ್ರಭ ಪತ್ರಿಕೆಯ ಹಿರಿಯ ವರದಿಗಾರ ಡಾ. ಸಂದೀಪ್ ವಾಗ್ಲೆ ಅವರಿಗೆ ಪ್ರಸಕ್ತ ಸಾಲಿನ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಮಾಡಲಾಯಿತು. ಕೊರೋನದಿಂದ ಪತ್ರಿಕೋದ್ಯಮದಲ್ಲಿ 2 ವರ್ಷದಲ್ಲೇ ಭಾರೀ ಸ್ಥಿತ್ಯಂತರ ಪತ್ರಿಕೋದ್ಯಮದಲ್ಲಿ ಮುಂದಿನ 10 ವರ್ಷಗಳಲ್ಲಿ ನಿರೀಕ್ಷಿಸಲಾಗಿದ್ದ ಸ್ಥಿತ್ಯಂತರವನ್ನು ಕೊರೋನದಿಂದಾಗಿ ಕಳೆದ ಎರಡು ವರ್ಷಗಳಲ್ಲೇ ಅನುಭವಿಸುವಂತಾಗಿದೆ ಎಂದು ಹಿರಿಯ ಪತ್ರಕರ್ತ ಜೋಗಿ (ಗಿರೀಶ್ ರಾವ್ ಹತ್ವಾರ್) ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ‘ನಾಳೆಯ ಪತ್ರಕರ್ತರು’ ಎಂಬ ವಿಷಯದಲ್ಲಿ ಅವರು ಮಾತನಾಡಿದ ಅವರು, ಕೊರೋನ ಸಾಂಕ್ರಾಮಿಕದಿಂದಾಗಿ ಬಹಳಷ್ಟು ಪತ್ರಿಕೆಗಳ ಮುದ್ರಣ ನಿಂತು ಹೋಗಿ ಆನ್‌ಲೈನ್ ಪತ್ರಿಕೆಯಾಗಿ ಹೊಸ ಸ್ವರೂಪವನ್ನು ಪಡೆಯುತ್ತಿದೆ ಎಂದು ಅವರು ಹೇಳಿದರು.

ಕಳೆದ ಹಲವು ವರ್ಷಗಳಿಂದಲೂ ಮುದ್ರಣ ಮಾಧ್ಯಮ ಕೊನೆಯಾಗುತ್ತದೆ ಎಂಬ ಭೀತಿಯನ್ನೇ ಎದುರಿಸುತ್ತಿದೆ. ಆದರೆ ವಾಸ್ತವದಲ್ಲಿ ಮುದ್ರಣ ಮಾಧ್ಯಮ ಕಾಲಕ್ಕನುಸಾರವಾಗಿ ಹೊಸ ಸ್ವರೂಪ, ವಿನ್ಯಾಸದೊಂದಿಗೆ ನಮಗೆ ಲಭ್ಯವಾಗುತ್ತದೆ. ಕಾರಣ ಮುದ್ರಣ ಮಾಧ್ಯಮಕ್ಕೆ ಇರುವ ನಂಬಿಕೆ ಇತರ ಮಾಧ್ಯಮಗಳಿಗೆ ಇಲ್ಲವಾಗಿರುವುದು ಎಂದು ಸಂವಾದದ ವೇಳೆ ಕಿರಿಯ ಪತ್ರಕರ್ತರೊಬ್ಬರ ಪ್ರಶ್ನೆಗೆ ಜೋಗಿಯವರು ಪ್ರತಿಕ್ರಿಯಿಸಿದರು.

ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿರಾಜ್ ಎಚ್.ಜಿ., ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿ.ಬಿ. ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು. ಇಬ್ರಾಹಿಂ ಅಡ್ಕಸ್ಥಳ ವಂದಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X