ಬಿಎಸ್‍ವೈ ನಿರ್ಧಾರ ಸಮಾಧಾನ ತಂದಿದೆ: ಸಚಿವ ಈಶ್ವರಪ್ಪ

ಬೆಂಗಳೂರು, ಜು.22: ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೈಗೊಂಡಿರುವ ನಿರ್ಧಾರ ತನಗೆ ಸಮಾಧಾನ ತಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಯಾರು ಹೇಳಿಲ್ಲ. ಅದೆಲ್ಲ, ಹೈಕಮಾಂಡ್ ಹಾಗೂ ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರ. ಅದನ್ನು ಅವರೇ ನಿರ್ಧರಿಸಿಕೊಳ್ಳುತ್ತಾರೆ ಎಂದರು.
ಇದೇ ವೇಳೆ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಬಿಜೆಪಿ ಸರ್ವನಾಶವಾಗುತ್ತೆ ಎಂದು ಹೇಳಿಕೆ ಕೊಟ್ಟಿರುವ ಮಠಾಧೀಶರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಈಶ್ವರಪ್ಪ, ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಹೇಳಿಕೆಗಳನ್ನು ಮೊದಲು ನೀಡಿದ್ದೇ ಲಿಂಗಾಯತ ಶಾಸಕರು. ಅಂತಹವರನ್ನು ಕರೆದು ಸ್ವಾಮೀಜಿಗಳು ಯಾಕೆ ಬುದ್ಧಿವಾದ ಹೇಳಲಿಲ್ಲ ಎಂದರು.
Next Story





