Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐಟಿಐ ಪಾಸಾದವರಿಗೆ ಆಕ್ಸಿಜನ್ ಘಟಕಗಳ...

ಐಟಿಐ ಪಾಸಾದವರಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ: ಡಿಸಿಎಂ ಅಶ್ವತ್ಥನಾರಾಯಣ

‘ಆಕ್ಸಿಜನ್ ಘಟಕ ನಿರ್ವಹಣೆ, ಕಾರ್ಯಾಚರಣೆ ಬಗ್ಗೆ ತರಬೇತಿ’

ವಾರ್ತಾಭಾರತಿವಾರ್ತಾಭಾರತಿ22 July 2021 7:21 PM IST
share
ಐಟಿಐ ಪಾಸಾದವರಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು, ಜು.22: ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನೆ ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಗುರುವಾರ ವಿಕಾಸಸೌಧದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ-ಕಾರ್ಯಾಚರಣೆ ಕುರಿತ ಆನ್‍ಲೈನ್ ತರಬೇತಿಗೆ ವರ್ಚುಯಲ್ ಕಾರ್ಯಕ್ರಮದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ರಾಜ್ಯದ ಪ್ರತಿಯೊಂದು ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಇದುವರೆಗೆ 350 ಘಟಕಗಳನ್ನು ಅಳವಡಿಸಲಾಗಿದೆ. ಇವುಗಳ ನಿರ್ವಹಣೆಯ ಹೊಣೆಯನ್ನು ಐಟಿಐ ವಿದ್ಯಾರ್ಥಿಗಳಿಗೆ ವಹಿಸುವುದು ಉತ್ತಮ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಹಳೆಯ ಸ್ಥಿತಿಯಲ್ಲಿರುವ 150 ಐಟಿಐಗಳನ್ನು ಉನ್ನತೀಕರಣ ಮಾಡಲು ಟಾಟಾ ಟೆಕ್ನಾಲಜೀಸ್ ಜತೆ ಸರಕಾರ ಒಡಂಬಡಿಕೆ ಮಾಡಿಕೊಂಡಿದೆ. ಹೀಗಾಗಿ ಇನ್ನು ಮುಂದೆ ಐಟಿಐ ವಿದ್ಯಾರ್ಥಿಗಳು ಆಕ್ಸಿಜನ್ ಘಟಕಗಳನ್ನು ನಿರ್ವಹಿಸುವುದು ಮಾತ್ರವಲ್ಲ, ಆಕ್ಸಿಜನ್ ತಯಾರಿಕಾ ಯಂತ್ರಗಳನ್ನು ತಯಾರಿಸುವ ಕುಶಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಅಶ್ವತ್ಥ ನಾರಾಯಣ ಸಲಹೆ ಮಾಡಿದರು.
ಕೇಂದ್ರ ಸರಕಾರದ ತರಬೇತಿ ಮಹಾ ನಿರ್ದೇಶನಾಲಯ ಕೈಗೊಂಡಿರುವ ಈ ತರಬೇತಿ ಕಾರ್ಯಕ್ರಮ ಅತ್ಯುತ್ತಮ ಕ್ರಮವಾಗಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X