ಉಡುಪಿ: 82 ಮಂದಿಗೆ ಕೊರೋನ ಪಾಸಿಟಿವ್
![ಉಡುಪಿ: 82 ಮಂದಿಗೆ ಕೊರೋನ ಪಾಸಿಟಿವ್ ಉಡುಪಿ: 82 ಮಂದಿಗೆ ಕೊರೋನ ಪಾಸಿಟಿವ್](https://www.varthabharati.in/sites/default/files/images/articles/2021/07/22/299807-1626962302.jpg)
ಉಡುಪಿ, ಜು.22: ಜಿಲ್ಲೆಯಲ್ಲಿ ಇಂದು ಕೊರೋನಕ್ಕೆ 82 ಮಂದಿ ಪಾಸಿಟಿವ್ ಬಂದಿದ್ದು, 94 ಮಂದಿ ಗುಣಮುಖರಾಗಿದ್ದಾರೆ. ಸೋಂಕಿಗೆ ಸಕ್ರಿಯರಾಗಿರು ವವರ ಸಂಖ್ಯೆ 834 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಕೋವಿಡ್-19 ಸೋಂಕಿಗೆ ಜಿಲ್ಲೆಯಲ್ಲಿ ಯಾರೂ ಬಲಿಯಾಗಿಲ್ಲ. ಹೀಗಾಗಿ ಬಲಿಯಾದವರ ಒಟ್ಟು ಸಂಖ್ಯೆ 408ರಲ್ಲಿದೆ. ದಿನದಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟ 82 ಮಂದಿಯಲ್ಲಿ 46 ಮಂದಿ ಪುರುಷರು ಹಾಗೂ 36 ಮಂದಿ ಮಹಿಳೆಯರು. ಉಡುಪಿ ತಾಲೂಕಿನ 44, ಕುಂದಾಪುರ ತಾಲೂಕಿನ 11, ಕಾರ್ಕಳ ತಾಲೂಕಿನ 26 ಹಾಗೂ ಹೊರಜಿಲ್ಲೆಯ ಒಬ್ಬರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 11 ಮಂದಿ ಕೋವಿಡ್ ಆಸ್ಪತ್ರೆ ಹಾಗೂ ಉಳಿದ 71 ಮಂದಿ ಮನೆಯಲ್ಲೇ ಚಿಕಿತ್ಸೆಯಲ್ಲಿದ್ದಾರೆ.
ಬುಧವಾರ 94 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 67,401ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 4828 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 68,643ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,51,553 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಜಿಲ್ಲೆಯಲ್ಲಿ ಸದ್ಯ 11 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.
2,924 ಮಂದಿಗೆ ಕೋವಿಡ್ ಲಸಿಕೆ
ಉಡುಪಿ ಜಿಲ್ಲೆಯಲ್ಲಿ ಇಂದು 2,924 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 986 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿ ದರೆ, 1,938 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು 18ರಿಂದ 44 ವರ್ಷದೊಳಗಿನ 682 ಮಂದಿ ಮೊದಲ ಡೋಸ್ ಹಾಗೂ 153 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 304 ಮಂದಿ ಮೊದಲ ಡೋಸ್ ಹಾಗೂ 1,780 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಒಬ್ಬ ಆರೋಗ್ಯ ಕಾರ್ಯಕರ್ತ ಹಾಗೂ ನಾಲ್ವರು ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 4,89,653 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 1,66,296 ಮಂದಿ ಎರಡನೇ ಡೋಸ್ನ್ನು ಪಡೆದು ಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.