Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ಸ್ಥಿತಿ...

ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರ : ರಾಷ್ಟ್ರ, ರಾಜ್ಯ ನಾಯಕರಿಂದ ಆಸ್ಪತ್ರೆಗೆ ಭೇಟಿ

ಆರೋಗ್ಯ ಸುಧಾರಣೆಗಾಗಿ ಪ್ರಾರ್ಥನೆ

ವಾರ್ತಾಭಾರತಿವಾರ್ತಾಭಾರತಿ22 July 2021 9:54 PM IST
share
ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರ : ರಾಷ್ಟ್ರ, ರಾಜ್ಯ ನಾಯಕರಿಂದ ಆಸ್ಪತ್ರೆಗೆ ಭೇಟಿ

ಮಂಗಳೂರು, ಜು. 22: ನಗರದ ಯೆನೆಪೊಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ (80) ಆರೋಗ್ಯ ಗಂಭೀರ ಸ್ಥಿತಿಯಲ್ಲಿ ಮುಂದುವರಿದಿದೆ. ನುರಿತ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದೆ.

ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಬಿದ್ದು ತಲೆಯಲ್ಲಿ ರಕ್ತ ಹೆಪ್ಪುಗಟ್ಟಿ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದ ಆಸ್ಕರ್, ಸೋಮವಾರ ಪ್ರಜ್ಞೆ ಕಳೆದುಕೊಂಡಿದ್ದರು. ಬುಧವಾರದ ವೇಳೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೂ ದೇಹ ಚಲನೆ ಕಂಡುಬಂದಿತ್ತು. ಗುರುವಾರವೂ ಪ್ರಜ್ಞಾಹೀನ ಸ್ಥಿತಿ ಮುಂದುವರಿದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬುಧವಾರ ಅವರ ಕೈಯಲ್ಲಿ ಚಲನೆ ಕಂಡು ಬಂದಿತ್ತು. ವಾರಕ್ಕೆ ಮೂರು ಬಾರಿ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದ ಆಸ್ಕರ್ ಅವರಿಗೆ ನಿಗದಿಯಂತೆ ಬುಧವಾರ ಒಂದು ಹಂತದ ಡಯಾಲಿಸಿಸ್ ಚಿಕಿತ್ಸೆ ಆರಂಭವಾಗಿತ್ತು. ಗುರುವಾರ ಸಂಜೆ ವೇಳೆ ಡಯಾಲಿಸಿಸ್ ಚಿಕಿತ್ಸೆ ಪೂರ್ಣಗೊಂಡಿದೆ. ನಂತರ ಕೆಲ ಗಂಟೆಗಳ ಕಾಲ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ ಮುಂದಿನ ಚಿಕಿತ್ಸಾ ನಿರ್ಧಾರವನ್ನು ವೈದ್ಯರು ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯೆನೆಪೊಯ ಆಸ್ಪತ್ರೆ ವೈದ್ಯರು ಸೇರಿದಂತೆ ಉಡುಪಿ, ಮಂಗಳೂರಿನ ಪರಿಣತ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ. ಆಸ್ಕರ್ ಅವರ ಪತ್ನಿ, ಪುತ್ರ, ಪುತ್ರಿ, ಸಂಬಂಧಿಕರು ಕೂಡ ಆಸ್ಪತ್ರೆಯಲ್ಲೇ ಇದ್ದಾರೆ. ಸೋನಿಯಾ, ರಾಹುಲ್ ಗಾಂಧಿ, ದಿಗ್ವಿಜಯ ಸಿಂಗ್, ಅಶೋಕ್ ಗೆಹ್ಲೋಟ್, ಎಚ್.ಕೆ. ಪಾಟೀಲ್ ಸೇರಿದಂತೆ ರಾಜ್ಯ, ರಾಷ್ಟ್ರ ಮಟ್ಟದ ವಿವಿಧ ಪಕ್ಷಗಳ ಮುಖಂಡರು ಆಸ್ಕರ್ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದ್ದು ನೆರವಿಗೆ ಧಾವಿಸಿದ್ದಾರೆ. ಅವಿಭಜಿತ ದ.ಕ. ಜಿಲ್ಲೆಯ ಕಾಂಗ್ರೆಸ್ ಮುಖಂಡರೆಲ್ಲರೂ ಆಸ್ಪತ್ರೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಕರ್ ಫೆರ್ನಾಂಡಿಸ್ ಹಲವು ತಿಂಗಳಿನಿಂದ ನಗರದಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದು, ವಾರಕ್ಕೆ ಮೂರು ಬಾರಿ ಅವರಿಗೆ ಡಯಾಲಿಸಿಸ್ ನೆರವೇರಿಸಲಾಗುತ್ತಿತ್ತು. ಜು.19ರಂದು ಬೆಳಗ್ಗೆ ಸರಳ ಯೋಗ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದು ತಲೆಗೆ ಪೆಟ್ಟಾಗಿತ್ತು. ಆದರೆ ಯಾವುದೇ ನೋವು-ಗಾಯ ಕಂಡುಬಾರದ ಹಿನ್ನೆಲೆಯಲ್ಲಿ ನಿರ್ಲಕ್ಷಿಸಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ನಗರದ ಯೆನೆಪೊಯ ಆಸ್ಪತ್ರೆಗೆ ಹೋಗಿದ್ದು, ವೈದ್ಯರು ಪರೀಕ್ಷೆ ನಡೆಸಿದಾಗ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದು ಗೊತ್ತಾಗಿದೆ. ಆಗಲೂ ಆಸ್ಕರ್ ಸಹಜವಾಗಿಯೇ ಇದ್ದರು. ಆದರೂ ಕೂಡಲೆ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಿ ಚಿಕಿತ್ಸೆ ಆರಂಭಿಸಲಾಗಿತ್ತು. ಮಂಗಳವಾರ ಪ್ರಜ್ಞೆ ಕಳೆದುಕೊಂಡಿದ್ದರು.

ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡೀಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಜನಾರ್ದನ ಪೂಜಾರಿ ಮಾಧ್ಯಮದ ಎದುರು ಬುಧವಾರ ಗದ್ಗದಿತರಾದರು.

ತಮ್ಮ ಅನಾರೋಗ್ಯದ ಮಧ್ಯೆಯೂ ಆಪ್ತನ ಆರೋಗ್ಯ ವಿಚಾರಿಸಲು ಆಗಮಿಸಿದ ಪೂಜಾರಿಯವರು, ಆಸ್ಕರ್ ಆರೋಗ್ಯವಾಗಿ ಬರುತ್ತಾರೆ. ದೇವರು ಅವರಿಗೆ ಸಹಾಯ ಮಾಡುತ್ತಾರೆ ಎಂದು ಹೇಳುತ್ತಾ ಕಣ್ಣೀರಿಟ್ಟರು. ಹಲವು ತಿಂಗಳ ನಂತರ ಸಾರ್ವಜನಿಕವಾಗಿ ಜನಾರ್ದನ ಪೂಜಾರಿ ಕಾಣಿಸಿಕೊಂಡಿದ್ದು, ತಮ್ಮ ಆಪ್ತನ ಆರೋಗ್ಯ ವಿಚಾರಣೆಗಾಗಿ ನಗರದ ಆಸ್ಪತ್ರೆಗೆ ಆಗಮಿಸಿದ್ದರು.

ಚರ್ಚ್, ದರ್ಗಾ, ದೇವಸ್ಥಾನದಲ್ಲಿ ಪ್ರಾರ್ಥನೆ: ಆಸ್ಕರ್ ಫೆರ್ನಾಂಡೀಸ್ ಅವರ ಆರೋಗ್ಯ ಸುಧಾರಣೆಗೆ ಮಂಗಳೂರಿನ ಬಿಷಪ್ ಹೌಸ್ ಚಾಪೆಲ್, ಚರ್ಚ್, ಮಸೀದಿ, ದರ್ಗಾ, ದೇವಸ್ಥಾನ, ದೈವಸ್ಥಾನ ಸಹಿತ ಜಿಲ್ಲೆಯ ವಿವಿಧೆಡೆ ವಿಶೇಷ ಪ್ರಾರ್ಥನೆ, ಪೂಜೆಗಳು ನೆರವೇರುತ್ತಿವೆ. ಆಸ್ಕರ್ ಫರ್ನಾಂಡಿಸ್ ಶೀಘ್ರ ಗುಣಮುಖರಾಲೆಂದು ಹಾರೈಸಲು ಮಂಗಳೂರು ಬಿಷಪ್ ಹೌಸ್ ಚಾಪೆಲ್‌ನಲ್ಲಿ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ನೇತೃತ್ವದಲ್ಲಿ ಸಾರ್ವಜನಿಕ ಪ್ರಾರ್ಥನೆ ಹಮ್ಮಿಕೊಳ್ಳಲಾಯಿತು.

ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರುಗಳಾದ ಫಾ. ಕ್ಲಿಫರ್ಡ್ ಫೆರ್ನಾಂಡಿಸ್, ಫಾ.ಒನಿಲ್ ಡಿಸೋಜ, ಫಾ.ಮ್ಯಾಕ್ಸಿಮ್ ರೊಜಾರಿಯೋ, ಫಾ.ಜೆಬಿ ಸಲ್ಡಾನಾ ವಿಶೇಷ ಪ್ರಾರ್ಥನೆ ನೆರವೇರಿಸಿದರು. ಆಸ್ಕರ್ ಅವರು ತಮ್ಮ ಸೇವೆಯ ಮೂಲಕ ದೇಶದ ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸುವ ಮೂಲಕ ದೇವರು ಮೆಚ್ಚುವ ಕೆಲಸ ಮಾಡಿದ್ದಾರೆ. ಅಂತಹವರು ಶೀಘ್ರವೇ ಗುಣಮುಖರಾಗಲಿ ಎಂದು ಧರ್ಮಗುರುಗಳು, ಮುಖಂಡರು ಪ್ರಾರ್ಥಿಸಿದರು.

ಈ ಸಂದರ್ಭ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಕಾರ್ಪೊರೇಟರ್‌ಗಳಾದ ನವೀನ್ ಡಿಸೋಜ, ಲ್ಯಾನ್ಸಿಲೊಟ್ಟೆ ಪಿಂಟೊ, ಕೆಪಿಸಿಸಿ ಕಾರ್ಯದರ್ಶಿ ಗಳಾದ ಎಂ.ಎ. ಗಫೂರ್, ಉಡುಪಿ ಜಿಲ್ಲಾ ಅಧ್ಯಕ್ಷ ಅಶೋಕ್ ಕಡವೂರು, ಕ್ರೈಸ್ತ ಸಮುದಾಯದ ಪ್ರಮುಖ ನಾಯಕರಾದ ಗಿಲ್ಬರ್ಟ್ ಡಿಸೋಜ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಆಶಿಕ್ ಜಿ. ಪೀರಿರಾ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಗಳಾದ ಪಿಯುಸ್ ಮೊಂತೆರೊ, ಸೌತ್ ಬ್ಲಾಕ್ ಅಲ್ಪಸಂಖ್ಯಾತರ ಅಧ್ಯಕ್ಷ ಐವನ್ ಡಿಸೋಜ ಮುಂತಾದವರು ಉಪಸ್ಥಿತರಿದ್ದರು.

ಆಸ್ಕರ್ ಫೆರ್ನಾಂಡೀಸ್ ಅವರ ಶೀಘ್ರ ಚೇತರಿಕೆಗಾಗಿ ಮಂಗಳೂರಿನ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರ, ಬಿಕರ್ನಕಟ್ಟೆಯ ಇನ್‌ಫ್ಯಾಂಟ್ ಜೀಸಸ್ ಚರ್ಚ್ ಹಾಗೂ ನಗರದ ಹಝರತ್ ಸಯಿದಾನಿ ಬೀಬಿ ದರ್ಗಾದಲ್ಲಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಆಶಿತ್ ಪಿರೇರಾ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರಾದ ಮಧುಕರ್ ಶೆಟ್ಟಿ, ಧನರಾಜ್ ಪೂಜಾರಿ, ಬೇಬಿರಾಜ್ ಗರೋಡಿ, ವಿಕ್ರಮಾಚಾರ್ಯ, ವಿಘ್ನೇಷ್ ಆಚಾರ್ಯ, ಮನ್ವಿತ್ ಕರ್ಕೇರ, ಬೃಜೇಶ್, ಮಿಲಾಜ್ ಅತ್ತಾವರ, ವೆಲ್ವಿನ್ ಕ್ಯಾಸ್ಟಲಿನೋ, ಒಝ್ವಾಲ್ಡ್, ಡಿಲನ್ ಪಿರೇರಾ, ರೋಶನ್ ಮೊಂತೆರೊ, ಜೋವಿಯನ್ ಲೋಬೊ, ಮಿಸ್ಬಾಹ್ ಶೇಖ್ ಉಪಸ್ಥಿತರಿದ್ದರು.

ಕುದ್ರೋಳಿ ದೇವಸ್ಥಾನ: ಕಾಂಗ್ರೆಸ್‌ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸುಧಾರಣೆ ಮತ್ತು ಶೀಘ್ರ ಗುಣಮುಖರಾಗಲೆಂದು ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿನಿಂದ ವಿಶೇಷ ಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಬಿ. ರಮಾನಾಥ ರೈ, ಅಭಯ ಚಂದ್ರ, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಐವನ್ ಡಿಸೋಜ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಪಕ್ಷದ ನಾಯಕರಾದ ಮಿಥುನ್ ರೈ, ಶಾಲೆಟ್ ಪಿಂಟೋ, ಶಶಿಧರ್ ಹೆಗ್ಡೆ,. ಬಿ.ಜಿ. ಸುವರ್ಣ, ರಾಜಶೇಖರ್ ಕೋಟ್ಯಾನ್, ಮುಹಮ್ಮದ್ ಮೋನು, ಲುಕ್ಮಾನ್ ಬಂಟ್ವಾಳ, ಅಬ್ದುಲ್ ರವೂಫ್, ಅನಿಲ್ ಕುಮಾರ್, ಸದಾಶಿವ ಶೆಟ್ಟಿ, ಟಿ.ಕೆ. ಸುಧೀರ್, ಜಯಶೀಲಾ ಅಡ್ಯಂತಾಯ, ಶುಭೋದಯ ಆಳ್ವ, ನೀರಜ್ ಪಾಲ್, ಲಾವಣ್ಯ ಬಲ್ಲಾಳ್, ಪ್ರಕಾಶ್ ಸಾಲ್ಯಾನ್, ಬೇಬಿ ಪೂಜಾರಿ, ರಮಾನಂದ್ ಪೂಜಾರಿ, ಅಪ್ಪಿ, ಶಾಂತಲ ಗಟ್ಟಿ, ರಕ್ಷಿತ್ ಶಿವರಾಮ್, ಶಶಿಕಲಾ ಕದ್ರಿ, ಹೊನ್ನಯ್ಯ, ದುರ್ಗಾಪ್ರಸಾದ್, ನಿತ್ಯಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

‘ಉನ್ನತ ಟೆಲಿಮೆಡಿಸಿನ್ ಚಿಕಿತ್ಸೆ’

ಆಸ್ಕರ್ ಫೆರ್ನಾಂಡಿಸ್ ಅವರಿಗೆ ಟೆಲಿಮೆಡಿಸಿನ್ ಮೂಲಕ ಅತ್ಯುತ್ತಮ ಚಿಕಿತ್ಸೆ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡೀಸ್ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಬುಧವಾರ ನಗರದ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಕುರಿತು ತಜ್ಞ ವೈದ್ಯರ ಜತೆ ಮಾತುಕತೆ ನಡೆಯುತ್ತಿದೆ. ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಪರಿಣಿತ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಮಣಿಪಾಲ್ ವೈದ್ಯರು ಸೇರಿದಂತೆ ವಿವಿಧ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದರು. ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕ ಗಾಂಧಿ ಕೂಡ ಆಸ್ಕರ್ ಕುಟುಂಬದ ಜೊತೆ ಮಾತನಾಡಿದ್ದಾರೆ. ಪೇಜಾವರ ಸ್ವಾಮೀಜಿ ಕೂಡ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದರು.

ಆಸ್ಕರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ನನ್ನ ತಂದೆ ಉಪಾಧ್ಯಕ್ಷರಾಗಿದ್ದರು. ನಮ್ಮ ತಂದೆಯವರ ಸ್ವಭಾವ ಮತ್ತು ಆಸ್ಕರ್ ಅವರ ಸ್ವಭಾವ ಒಂದೇ ಆಗಿತ್ತು. ಹೀಗಾಗಿ ನನ್ನ ಮೇಲೂ ವಿಶೇಷ ಪ್ರೀತಿ ಇದ್ದ ಕಾರಣ ಈ ಸ್ಥಾನಕ್ಕೇರಲು ಸಹಾಯ ಮಾಡಿದ್ದರು. ಅವರ ಆರೋಗ್ಯದ ವಿಚಾರದಲ್ಲಿ ಪ್ರಾರ್ಥಿಸುತ್ತೇವೆ. ಅವರು ಜಂಟಲ್‌ಮೆನ್, ಬಹಳ ಒಳ್ಳೆಯ ಮನುಷ್ಯ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X