ಆಸ್ಕರ್ ಫೆರ್ನಾಂಡಿಸ್ ಚೇತರಿಸುತ್ತಾರೆಂಬ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್
ಆಸ್ಕರ್ ಭೇಟಿಗಾಗಿ ಡಿಕೆಶಿ, ಸಿದ್ದರಾಮಯ್ಯ ಆಗಮನ

ಮಂಗಳೂರು, ಜು.22: ಸುಮಾರು 40 ವರ್ಷಗಳಿಂದ ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು ನಾನು ನೋಡಿ ತಿಳಿದು ಕೊಂಡಿದ್ದೇನೆ. ಅವರೊಬ್ಬ ಪಕ್ಷದ ಸರಳ, ಧೀಮಂತ ನಾಯಕರಾಗಿದ್ದಾರೆ. ಅವರು ಚೇತರಿಕೆ ಆಗ್ತಾರೆ ಎನ್ನುವ ವಿಶ್ವಾಸ ವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗಾರರಿಗೆ ತಿಳಿದ್ದಾರೆ.
ಅವರು ಅಸೌಖ್ಯರಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿನಲ್ಲಿ ನಡೆಯಬೇಕಾಗಿದ್ದ ಸಭೆ ರದ್ದು ಮಾಡಿರುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.
ಮಾಜಿ ಮುಖ್ಯ ಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡುತ್ತಾ ಹಿರಿಯ ನಾಯಕ ಆಸ್ಕರ್ ಅವರ ಚೇತರಿಕೆಗೆ ಎಲ್ಲರೂ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್ ಆರ್.ಪಾಟೀಲ್, ಸಲೀಂ ಅಹಮ್ಮದ್ ,ದ್ರುವ ನಾರಾಯಣ್ ಅವರನ್ನೊಳಗೊಂಡ ಕಾಂಗ್ರೆಸ್ ಹಿರಿಯ ನಾಯಕರ ತಂಡ ನಗರದ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ರ ಆರೋಗ್ಯದ ಬಗ್ಗೆ ವೈದ್ಯರ ಬಳಿ ವಿಚಾರಿಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯ ಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್ .ಲೋಬೊ, ಮೊಹಿಯುದ್ದೀನ್ ಬಾವ, ವಸಂತ ಬಂಗೇರ, ಐವನ್ ಡಿಸೋಜ, ಗೋಪಾಲ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಪಿ.ವಿ. ಮೋಹನ್, ಮಂಜುನಾಥ ಭಂಡಾರಿ, ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.












