ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲೂ ಹೋರಾಟ: ಕೋಡಿಹಳ್ಳಿ ಚಂದ್ರಶೇಖರ್

ಬೆಳಗಾವಿ, ಜು.22: ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಮಾದರಿಯಲ್ಲಿ ರಾಜ್ಯದಲ್ಲೂ ಹೋರಾಟಕ್ಕೆ ನಿರ್ಧರಿಸಿದ್ದೇವೆ ಎಂದು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಗುರುವಾರ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳು ಸಂಪೂರ್ಣ ರೈತ ವಿರೋಧಿಯಾಗಿದ್ದು, ಅವುಗಳನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಮಾದರಿಯಲ್ಲಿ. ರಾಜ್ಯದಲ್ಲೂ ಹೋರಾಟಕ್ಕೆ ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳಬೇಕು. ಕರ್ನಾಟಕದಲ್ಲಿ ಭೂ ಸುಧಾರಣೆ, ಎಪಿಎಂಸಿ ಸೇರಿ ಇನ್ನಿತರ ಜಾರಿಗೆ ತಂದಿರುವ ರೈತ ವಿರೋಧಿ ನೀತಿಗಳನ್ನು ತಕ್ಷಣವೇ ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Next Story





