ಬೆಂಗಳೂರು: ಸುಲಿಗೆ ಪ್ರಕರಣ; ಬಂಧನ

ಬೆಂಗಳೂರು, ಜು.22: ಕಳ್ಳತನ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧ ಬಿಡದಿ ಗ್ರಾಮಾಂತರ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಲಕ್ಕಿ, ರಾಜೇಶ್, ರಿಯಾಝ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಬಿಡದಿ ಹಾಗೂ ದೊಡ್ಡಮುದವಾಡಿ ರಸ್ತೆಯಲ್ಲಿ 7 ಜನರ ಗುಂಪು ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದ ಖಚಿತ ಮಾಹಿತಿ ಪಡೆದ ಬಿಡದಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story





