ಮಡಿಕೇರಿ : ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

ಸಾಂದರ್ಭಿಕ ಚಿತ್ರ
ಮಡಿಕೇರಿ ಜು.23 : ವಿದ್ಯುತ್ ತಂತಿ ಸ್ಪರ್ಷಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೊಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಬೆಂಬಳೂರಿನಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಜಾನಕಿ(60) ಎಂಬುವವರೇ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಬಟ್ಟೆ ಒಣ ಹಾಕುತ್ತಿದ್ದ ಸಂದರ್ಭ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





