Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭವಿಷ್ಯದ ನಾಯಕನ ಹುಡುಕಾಟ: ಬಿಜೆಪಿ...

ಭವಿಷ್ಯದ ನಾಯಕನ ಹುಡುಕಾಟ: ಬಿಜೆಪಿ ವರಿಷ್ಟರಿಗೆ ತಲೆನೋವು!

ವಾರ್ತಾಭಾರತಿವಾರ್ತಾಭಾರತಿ23 July 2021 7:41 PM IST
share
ಭವಿಷ್ಯದ ನಾಯಕನ ಹುಡುಕಾಟ: ಬಿಜೆಪಿ ವರಿಷ್ಟರಿಗೆ ತಲೆನೋವು!

ಬೆಂಗಳೂರು, ಜು. 23: ಹೈಕಮಾಂಡ್ ಸೂಚಿಸಿದರೆ `ರಾಜೀನಾಮೆ ನೀಡಲು ಸಿದ್ದ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ ಬೆನ್ನಲ್ಲೆ ಸಮರ್ಥ, ಭವಿಷ್ಯದ ನಾಯಕನ ಹುಡುಕಾಟ ಬಿಜೆಪಿ ವರಿಷ್ಟರಿಗೆ ತೀವ್ರ ತಲೆನೋವಾಗಿದ್ದು, ಯಾರನ್ನೂ ಆಯ್ಕೆ ಮಾಡುವುದು ಎಂಬ ಧರ್ಮ ಸಂಕಟಕ್ಕೆ ಸಿಲುಕಿದೆ.

ಸಂಘ ಪರಿವಾರದ ಪ್ರಮುಖರಾದ ಮುಕುಂದ್ ಜೀ ಅವರನ್ನು ಬಿಜೆಪಿ ವರಿಷ್ಟರು ನೂತನ ನಾಯಕನ ಆಯ್ಕೆಯ ಸಂಬಂಧ ಚರ್ಚಿಸಲು ದಿಲ್ಲಿಗೆ ಕರೆಸಿಕೊಂಡಿದ್ದು, ಮುಕುಂದ್ ಜೀ ಅವರು ಇಂದು ದಿಲ್ಲಿಗೆ ತೆರಳಿದ್ದು, ನಾಳೆ ಅವರು ವರಿಷ್ಟ ನಾಯಕರ ಜತೆ ಹೊಸ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ. ನೂತನ ಮುಖ್ಯಮಂತ್ರಿ ಹುದ್ದೆಗೆ ವರಿಷ್ಟರು ಸೂಚಿಸಿದ ಕೆಲವು ಹೆಸರುಗಳಿಗೆ ಸಂಘ ಪರಿವಾರದ ಪ್ರಮುಖರಿಂದ ಸಹಮತಿ ಸಿಗದ ಕಾರಣ ಎಲ್ಲರಿಗೂ ಒಪ್ಪಿತನಾಗುವ ನಾಯಕನ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ, ಹುಬ್ಬಳ್ಳಿ-ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

ರಾಜ್ಯದ ಪ್ರಬಲ ಸಮುದಾಯವಾಗಿ ಬಿಜೆಪಿಯ ಮುಖ್ಯ ವೋಟ್ ಬ್ಯಾಂಕ್ ಆಗಿರುವ ವೀರಶೈವ ಲಿಂಗಾಯತ ಸಮುದಾಯವರನ್ನೇ ಮುಖ್ಯಮಂತ್ರಿ ಹುದ್ದೆಗೆ ಕೂರಿಸಬೇಕೆಂಬ ಕೂಗು ಬಲವಾಗಿದೆ. ಹೀಗಾಗಿ, ಸಚಿವ ಮುರುಗೇಶ್ ನಿರಾಣಿ, ಶಾಸಕ ಅರವಿಂದ ಬೆಲ್ಲದ್ ಹೆಸರುಗಳು ಮುಂಚೂಣಿಯಲ್ಲಿದೆ. ಲಿಂಗಾಯತ ಸಮುದಾಯವನ್ನು ಬಿಟ್ಟರೆ ಬಿ.ಎಲ್.ಸಂತೋಷ್, ಪ್ರಹ್ಲಾದ್ ಜೋಶಿ, ಸಿ.ಟಿ.ರವಿ ಹಾಗೂ ಡಾ.ಅಶ್ವತ್ಥ ನಾರಾಯಣ ಅವರ ಹೆಸರುಗಳು ಮುನ್ನಲ್ಲೆಗೆ ಬಂದಿವೆ.

ಮುಖ್ಯಮಂತ್ರಿ ಹುದ್ದೆಗೆ ತೆರೆ ಮರೆಯಲ್ಲಿ ಮುಖಂಡರು ಕಸರತ್ತು ನಡೆಸಿದ್ದರೂ, ಅಂತಿಮವಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಾತುಗಳೇ ಅಂತಿಮವಾಗಿದೆ. ಹೀಗಾಗಿ, ಮೋದಿ ಹಾಗೂ ಅಮಿತ್ ಶಾ ಕೃಪಾಕಟಾಕ್ಷ ಇರುವವರಿಗೇ ಮುಖ್ಯಮಂತ್ರಿ ಹುದ್ದೆ ಒಲಿಯುವುದು ನಿಶ್ಚಿತ. ಆ ಹಿನ್ನೆಲೆಯಲ್ಲಿ ವರಿಷ್ಟರನ್ನು ಭೇಟಿ ಮಾಡಿ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X