Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಧಾರಾಕಾರ ಮಳೆ : ರಸ್ತೆಗಳು...

ಕೊಡಗಿನಲ್ಲಿ ಧಾರಾಕಾರ ಮಳೆ : ರಸ್ತೆಗಳು ಜಲಾವೃತ, ಗುಡ್ಡ ಕುಸಿತ, ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ23 July 2021 7:51 PM IST
share
ಕೊಡಗಿನಲ್ಲಿ ಧಾರಾಕಾರ ಮಳೆ : ರಸ್ತೆಗಳು ಜಲಾವೃತ, ಗುಡ್ಡ ಕುಸಿತ, ಮನೆಗಳಿಗೆ ಹಾನಿ

ಮಡಿಕೇರಿ ಜು.23 : ಕೊಡಗು ಜಿಲ್ಲೆಯಾದ್ಯಂತ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ವೇಗವಾಗಿ ಬೀಸುತ್ತಿರುವ ಗಾಳಿಯಿಂದ ಆತಂಕ ಸೃಷ್ಟಿಯಾಗಿದೆ.

ಮಡಿಕೇರಿ ತಾಲೂಕಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ಹಾನಿ ಉಂಟಾಗಿದ್ದು, ಕುಶಾಲನಗರ ಮತ್ತು ಸಂಪಾಜೆ ಭಾಗದ ಹೆದ್ದಾರಿಯಲ್ಲಿ ಅಲ್ಲಲ್ಲಿ ಕುಸಿತ ಕಂಡು ಬಂದಿದೆ. ಆದರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿಲ್ಲ.  

ಹೊದಕಾನ- ಆವಂಡಿ ರಸ್ತೆ ರಸ್ತೆಯಲ್ಲಿ ಬೃಹತ್ ಬರೆ ಕುಸಿದಿದೆ. ರಸ್ತೆ ತುಂಬಾ ಮಣ್ಣಿನ ರಾಶಿ ಆವರಿಸಿದ್ದು, ಸಂಚಾರ ವ್ಯತ್ಯಯಗೊಂಡಿತ್ತು. ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಎತ್ತರ ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ನಾಪೋಕ್ಲು ಮತ್ತು ಮಡಿಕೇರಿ ರಸ್ತೆ ಜಲಾವೃತಗೊಂಡಿದೆ. ಮುಖ್ಯ ರಸ್ತೆಯವರೆಗೂ ನೀರು ಬಂದಿದ್ದು, ಮಳೆ ಹೀಗೆ ಮುಂದುವರೆದರೆ ಪಟ್ಟಣ ದ್ವೀಪದಂತ್ತಾಗುವ ಸಾಧ್ಯತೆಗಳಿದೆ. 

ಗ್ರಾ.ಪಂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ನದಿ ತೀರ ಮತ್ತು ಬೆಟ್ಟ ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಿಳಿಸಿದೆ. ಶ್ರೀಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿಯಲ್ಲಿ ಭಕ್ತರ ಸಂಖ್ಯೆ ಕ್ಷೀಣಿಸಿದೆ. 

ನಾಪೋಕ್ಲು, ಕಕ್ಕಬ್ಬೆ ಸುತ್ತಮುತ್ತಲ ಗ್ರಾಮಗಳಲ್ಲಿ ನಿರಂತರ ಮಳೆಯಾಗುತ್ತಿದೆ. ನದಿ, ತೊರೆಗಳು ತುಂಬಿ ಹರಿಯುತ್ತಿದ್ದು, ಕುಂಜಿಲ- ಕಕ್ಕಬ್ಬೆ ಪೈನರಿ ಜುಮಾ ಮಸೀದಿಗೆ ಹೋಗುವ ರಸ್ತೆ ಜಲಾವೃತಗೊಂಡಿದೆ. ಮಹಾಮಳೆಯಿಂದ ಈ ಭಾಗದಲ್ಲಿ ಹಾನಿ ಉಂಟಾಗಿದ್ದು, ರಸ್ತೆಗಳು ಹದಗೆಟ್ಟಿವೆ. ನದಿ ತೀರದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. 

ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ನದಿಗಳು ತುಂಬಿ ಹರಿಯುತ್ತಿವೆ. ಕಾವೇರಿ ನದಿ ಪಾತ್ರದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ತಹಶೀಲ್ದಾರ್ ಯೋಗಾನಂದ ಅವರು ಬೇತ್ರಿ ಸೇತುವೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಮಳೆಹಾನಿ ಪ್ರದೇಶಗಳಿಗೂ ಅಧಿಕಾರಿಗಳು ಭೇಟಿ ನೀಡಿದರು.

ಮಾಲ್ದಾರೆ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಗಾಳಿ ಸಹಿತ ಮಳೆಯಾಗುತ್ತಿದ್ದು, ಮನೆಯೊಂದು ಬಿದ್ದು ಹಾನಿಯಾಗಿದೆ.
ಪಂಚಾಯಿತಿ ವ್ಯಾಪ್ತಿಯ ಬಾಡಗಬಾಣಂಗಾಲದ 1ನೇ ವಾರ್ಡ್‍ನ ಕಾಡಂಗಡಿಯಲ್ಲಿ ಅಜೀಜ್ ಎಂಬುವವರ ಮನೆ ಬಿದ್ದಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದು, ವಸ್ತುಗಳು ಹಾನಿಗೀಡಾಗಿವೆ. 

ಗ್ರಾ.ಪಂ ಸದಸ್ಯ ಹನೀಫ್ ಸ್ಥಳಕ್ಕೆ ಭೇಟಿ ನೀಡಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ. ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಹಟ್ಟಿಹೊಳೆ, ಮುಕ್ಕೊಡ್ಲು, ತಂತಿಪಾಲ ವ್ಯಾಪ್ತಿಯಲ್ಲಿ ನಿರಂತರ ಗಾಳಿ, ಮಳೆಯಾಗುತ್ತಿರುವುದರಿಂದ ಮುಖ್ಯ ರಸ್ತೆಯಲ್ಲಿ ಬರೆ ಕುಸಿಯುತ್ತಿದೆ. ಬೃಹತ್ ಮಣ್ಣಿನ ರಾಶಿ ರಸ್ತೆಯನ್ನು ಆವರಿಸಿರುವುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೊಳೆಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಹೊಳೆ ಬದಿ ನಿವಾಸಿಗಳು ಎಚ್ಚರಿಕೆಯಿಂದಿರುವಂತೆ ಶಾಸಕರು ಮನವಿ ಮಾಡಿದ್ದಾರೆ.

ರೆಡ್ ಅಲರ್ಟ್ ಘೋಷಣೆ 

ಮಳೆ ಮತ್ತೆ ಜೋರಾಗಲಿದ್ದು, ಶನಿವಾರದವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜನ ಎಚ್ಚರಿಕೆಯಿಂದಿರುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಭಾಗಮಂಡಲದಲ್ಲಿ 165.40 ಮಿ.ಮೀ ಮತ್ತು ಶಾಂತಳ್ಳಿಯಲ್ಲಿ 160 ಮಿ.ಮೀ ದಾಖಲೆಯ ಮಳೆಯಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 97.52 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.53 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1513.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 887.65 ಮಿ.ಮೀ ಮಳೆಯಾಗಿತ್ತು.                             

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 108.88 ಮಿ.ಮೀ. ಕಳೆದ ವರ್ಷ ಇದೇ ದಿನ 4.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2110.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1295.20 ಮಿ.ಮೀ. ಮಳೆಯಾಗಿತ್ತು.    

ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 97.54 ಮಿ.ಮೀ. ಕಳೆದ ವರ್ಷ ಇದೇ ದಿನ 1.67 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1249.33 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 830.85 ಮಿ.ಮೀ. ಮಳೆಯಾಗಿತ್ತು.  

ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 86.13 ಮಿ.ಮೀ. ಕಳೆದ ವರ್ಷ ಇದೇ ದಿನ 4.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1179.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 536.90 ಮಿ.ಮೀ. ಮಳೆಯಾಗಿತ್ತು. 

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 69.40, ನಾಪೋಕ್ಲು 147.20, ಸಂಪಾಜೆ 53.50, ಭಾಗಮಂಡಲ 165.40, ವಿರಾಜಪೇಟೆ ಕಸಬಾ 110.40, ಹುದಿಕೇರಿ 88.85, ಶ್ರೀಮಂಗಲ 176, ಪೊನ್ನಂಪೇಟೆ 92, ಅಮ್ಮತ್ತಿ 50, ಬಾಳೆಲೆ 68, ಸೋಮವಾರಪೇಟೆ ಕಸಬಾ 82, ಶನಿವಾರಸಂತೆ 115.80, ಕೊಡ್ಲಿಪೇಟೆ 75, ಕುಶಾಲನಗರ 22, ಸುಂಟಿಕೊಪ್ಪ 62 ಮಿ.ಮೀ.ಮಳೆಯಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X