ಯಶವಂತಪುರ ಕ್ಷೇತ್ರದ ಎಲ್ಲ ಜನತೆಗೆ ಶೀಘ್ರ ಲಸಿಕೆ: ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು, ಜು.23: ಯಶವಂತಪುರ ಕ್ಷೇತ್ರದ ಎಲ್ಲ ಜನತೆಗೆ ಶೀಘ್ರವಾಗಿ ಕೋವಿಡ್ ಲಸಿಕೆ ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ನಗರದ ಉಲ್ಲಾಳು ವಾರ್ಡ್‍ನ ಸುತ್ತಮುತ್ತ ಪ್ರದೇಶದಲ್ಲಿ ಆಯೋಜಿಸಿದ್ದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯಶವಂತಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯವಿರುವ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಸಿಗುವಂತೆ ಕ್ರಮ ವಹಿಸಲಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗದ ಕುರಿತು ಭಯ ಪಡುವ ಅಗತ್ಯವಿಲ್ಲ. ಆದರೆ, ರೋಗದ ಕುರಿತು ಎಚ್ಚರ ವಹಿಸಿವುದು ಅಗತ್ಯ. ಈ ನಿಟ್ಟಿನಲ್ಲಿ ಸರಕಾರ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರೋಗದ ನಿರ್ಮೂಲನೆಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಜಿ.ಮುನಿರಾಜು, ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಅನಿಲ್ ಚಳಗೇರಿ, ಕದರಪ್ಪ, ಗಿರೀಶ್ ಮತ್ತಿತರರಿದ್ದರು.
Next Story





