ಉಡುಪಿ, ಜು.23: ಪುತ್ತೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಿನ್ನಿ ಗೋಳಿಯ ನಿವಾಸಿ ದುರ್ಗಾಪ್ರಸಾದ್ (38) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ಜು.23ರಂದು ಬೆಳಗ್ಗೆ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.