Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕದಲ್ಲಿ ಭ್ರಷ್ಟ ಮತ್ತು ಜನವಿರೋಧಿ...

ಕರ್ನಾಟಕದಲ್ಲಿ ಭ್ರಷ್ಟ ಮತ್ತು ಜನವಿರೋಧಿ ಸರಕಾರ: ರಣದೀಪ್ ಸುರ್ಜೇವಾಲ

ವಾರ್ತಾಭಾರತಿವಾರ್ತಾಭಾರತಿ24 July 2021 6:34 PM IST
share
ಕರ್ನಾಟಕದಲ್ಲಿ ಭ್ರಷ್ಟ ಮತ್ತು ಜನವಿರೋಧಿ ಸರಕಾರ: ರಣದೀಪ್ ಸುರ್ಜೇವಾಲ

ತುಮಕೂರು: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಭ್ರಷ್ಟಾಚಾರ ಮತ್ತು ಜನ ವಿರೋಧಿ ಧೋರಣೆಯನ್ನು ಹೊಂದಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿಗಳಾದ ರಣದೀಪ್ ಸುರ್ಜೇವಾಲ ಆರೋಪಿಸಿದ್ದಾರೆ.

ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ವಿಭಾಗೀಯ ಮಟ್ಟದ ಮುಖಂಡರ ಸಭೆಯ ವೇಳೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಗ್ಧ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರವಾದ ಮೊಟ್ಟೆ ಖರೀದಿಯಲ್ಲಿಯೂ ಲಂಚ ಹೊಡೆಯುವ ಮೂಲಕ ನಮ್ಮದು ಜನವಿರೋಧಿ ಸರಕಾರ ಎಂಬುದನ್ನು ಸಾಬೀತುಪಡಿಸಿದೆ ಎಂದರು.

ಅತ್ಯಂತ ಜನವಿರೋಧಿ ಸರಕಾರದಲ್ಲಿ ಕೇವಲ ಮುಖ್ಯಮಂತ್ರಿ ಬದಲಾದರೆ ಸಾಲದು, ಇಡೀ ವ್ಯವಸ್ಥೆಯೇ ಬದಲಾಗಬೇಕು. ಕೋರೋನದಿಂದ ಒಂದು ಲಕ್ಷಕ್ಕೂ ಅಧಿಕ ಜನ ರಾಜ್ಯದಲ್ಲಿ ತೀರಿಹೋದರು. ಆದರೆ ಈ ಸರಕಾರ ಜನರ ನೆರವಿಗೆ ಬರಲಿಲ್ಲ. ಕೋರೋನ ಮೊದಲ ಮತ್ತು ಎರಡನೇ ಅಲೆಯಲ್ಲಿ ಸಂಕಷ್ಟದಲ್ಲಿದ್ದ ಜನರ ನೆರವಿಗೆ ನಿಂತಿದ್ದು ಕಾಂಗ್ರೆಸ್ ಪಕ್ಷ. ಪಕ್ಷದ ಕಾರ್ಯಕರ್ತರು, ಮುಖಂಡರು ತಮ್ಮ ಕೈಲಾದ ನೆರವನ್ನು ಕೈಯಿಂದ ಭರಿಸಿ, ಸಂಕಷ್ಟಕ್ಕೆ ಸ್ಪಂದಿಸಿದರು. ಪುಡ್‍ಕಿಟ್ ವಿತರಣೆ, ಕೋವಿಡ್ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದನ್ನು ಕಾಂಗ್ರೆಸ್ ಮುಖಂಡರೇ ಬಯಲಿಗೆಳೆದರು ಎಂದು ಸುರ್ಜೇವಾಲ ತಿಳಿಸಿದರು.  

ಕಾಂಗ್ರೆಸ್ ಪಕ್ಷ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ವಿಧಾನಪರಿಷತ್ ಚುನಾವಣೆಗಳನ್ನು ಅತ್ಯಂತ ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಕಾರ್ಯಕರ್ತರ ದ್ವನಿಯೇ ಪಕ್ಷದ ದ್ವನಿಯಾಗಿ ಪ್ರತಿಬಿಂಬಿಸುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಈ ರೀತಿ ವಿಭಾಗೀಯ ಸಭೆಗಳನ್ನು ನಡೆಸಿ,ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಿ, ಅವರ ಸಲಹೆ,ಸೂಚನೆಗಳನ್ನು ಪಡೆದು, ಅಗತ್ಯ ಬದಲಾವಣೆಗಳನ್ನು ತರಲಿದೆ. ಕಾಂಗ್ರೆಸ್ ಪಕ್ಷವನ್ನು ಕೇಡರ್ ಬೇಸ್ ಪಕ್ಷವಾಗಿ ರೂಪಿಸಲಾಗುತ್ತಿದೆ ಎಂದರು.

ಬಿಜೆಪಿ ಪಕ್ಷದ ಮೇಲೆ ಹಿಡಿತ ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು, ಈಗಾಗಲೇ ಹಿರಿಯ ನಾಯಕರಾದ ಲಾಲ್‍ಕೃಷ್ಣ ಅಡ್ವಾಣಿ, ಮುರುಳಿ ಮನೋಹರ ಜೋಷಿ ಸೇರಿದಂತೆ ಎಲ್ಲ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಇಳಿದ ತಕ್ಷಣ ಯಡಿಯೂರಪ್ಪನವರಿಗೂ ಅದೇ ಸ್ಥಿತಿ ಬರಲಿದೆ. ಇದು ಭವಿಷ್ಯವಲ್ಲ, ವಾಸ್ತವ ಎಂದು ಸುರ್ಜೇವಾಲ ಹೇಳಿದರು.

ಕಾಂಗ್ರೆಸ್ ಪಕ್ಷ ಮುಂದಿನ ವಿಧಾನಸಭಾ ಚುನಾವಣೆಯನ್ನು ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾಗಾಂಧಿ, ಉಪಾಧ್ಯಕ್ಷರಾದ ರಾಹುಲ್‍ಗಾಂಧಿ ಅವರ ಮಾರ್ಗದರ್ಶನದಂತೆ ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಿದೆ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಮುಂದಿರುವ ಗುರಿ, ಆ ನಂತರ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಮುಖ್ಯಮಂತ್ರಿ ಕುರಿತ ಯಾವುದೇ ಚರ್ಚೆಗಳು ಈಗ ಅಪ್ರಸ್ತುತ ಎಂದು ಸ್ಪಷ್ಟಪಡಿಸಿದರು.

ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ವಿಧಾನಪರಿಷತ್ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಸಂಕಲ್ಪ ಯಾತ್ರೆಯನ್ನು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ. ಬೂತ್ ಮಟ್ಟದಲ್ಲಿ, ಗ್ರಾಮ ಮಟ್ಟದಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಆರಂಭವಾಗಿದೆ. ಕರ್ನಾಟಕ ಜನತೆ ಈ ಹಿಂದಿನ ಕಾಂಗ್ರೆಸ್ ಪಕ್ಷದ ಸರಕಾರಕ್ಕೂ, ಹಾಲಿ ಇರುವ ಬಿಜೆಪಿ ಪಕ್ಷದ ಸರಕಾರವನ್ನು ತುಲನೆ ಮಾಡಿ ನೋಡುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದ್ದನ್ನು ಬಿಟ್ಟರೆ, ಜನರಿಗೆ ಒಂದೇ ಒಂದು ಕಾರ್ಯಕ್ರಮ ನೀಡಿಲ್ಲ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸುವ ಮೂಲಕ ಅವರ ಆಡಳಿತ ಸರಿಯಿಲ್ಲ ಎಂದು ಬಿಜೆಪಿ ಪಕ್ಷದ ಹೈಕಮಾಂಡ್ ಒಪ್ಪಿಕೊಂಡಂತಾಗಿದೆ ಎಂದರು.

ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಪಕ್ಷದ ಕಾರ್ಯಕರ್ತರನ್ನು ಮುಂಬರುವ ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಇಂದಿನ ಸಭೆ ಅತ್ಯಂತ ಮಹತ್ವ ಪಡೆದಿದೆ. ಸರಕಾರ ಈ ಚುನಾವಣೆಗಳನ್ನು ಮುಂದೂಡಿದ್ದರೂ, ಇದನ್ನು ಚುನಾವಣೆ ಆಯೋಗ ಒಪ್ಪಿಕೊಂಡಿಲ್ಲ. ಯಾವುದೇ ಚುನಾವಣೆ ನಡೆಸುವುದು, ಮುಂದೂಡುವುದು ಸರಕಾರದ ಕೆಲಸವಲ್ಲ. ಚುನಾವಣಾ ಆಯೋಗದ ಕೆಲಸ. ಹಾಗಾಗಿ ಯಾವುದೇ ಸಂದರ್ಭದಲ್ಲಿಯಾದರೂ ಚುನಾವಣೆ ಎದುರಾಗಬಹುದು ಎಂದರು.

ಒಬ್ಬ ಭ್ರಷ್ಟ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದಾಕ್ಷಣ ಬಿಜೆಪಿ ಪಕ್ಷವೇನು ಸ್ವಚ್ಚವಾಗಲ್ಲ. ಇಡೀ ಪಕ್ಷವೇ ಭ್ರಷ್ಟ ಪಕ್ಷ. ಐಎಎಸ್‍ನಂತಹ ಉನ್ನತ ಹುದ್ದೆಗಳನ್ನು ತುಂಬುವಾಗಲು ಹಣ ಪಡೆದು ಹುದ್ದೆ ನೀಡುವಂತಹ ನೀಚತನಕ್ಕೆ ಇಳಿದಿರುವುದು ದುರಂತ. ಕಳೆದ ಎರಡು ವರ್ಷಗಳಲ್ಲಿ ಅಭಿವೃದ್ದಿ ಎಂಬುದೇ ಇಲ್ಲವಾಗಿದೆ. ಹಾಗಾಗಿ ಜನರ ಒಳಿತಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ,ಮಾಜಿ ಸಚಿವ ಟಿ.ಬಿ.ಜಯಚಂದ್ರ, ರಮೇಶ್‍ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ವಿ.ಆರ್.ಸುದರ್ಶನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X