ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಆಗ್ರಹ
ಉಡುಪಿ, ಜು.24: ಅಂಗನವಾಡಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರಲ್ಲಿ ಪೌಷ್ಠಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರದಿಂದ ಕೊಡಮಾಡುವ ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಲಂಚಕ್ಕೆ ಬೇಡಿಕೆ ಇಟ್ಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಟೀಕಿಸಿದ್ದಾರೆ.
ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹಸ್ತಕ್ಷೇಪ ನಡೆಸಲು ಒಪ್ಪಿಕೊಂಡು, ಮಾಸಿಕ ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಬಹಿರಂಗಗೊಂಡಿದ್ದು ಆ ನೆಲೆಯಲ್ಲಿ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸೂಕ್ತ ತನಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Next Story





