ಆಸ್ರತ್ರೆಯಲ್ಲಿ ಆಸ್ಕರ್ ಆರೋಗ್ಯ ವಿಚಾರಿಸಿದ ಅದಮಾರುಶ್ರೀ

ಉಡುಪಿ, ಜು.24: ಪರ್ಯಾಯ ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ತೀವ್ರ ನಿಗಾ ಘಟಕದಲ್ಲಿ ಅನಾರೋಗ್ಯಕ್ಕಾಗಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿಯ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದರು.
ಆಸ್ಕರ್ ಚೇತರಿಕೆಗೆ ಹಾರೈಕೆ: ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾರೈಸಿದ್ದಾರೆ.
Next Story





