ದ.ಕ. ಜಿಲ್ಲೆ : ಕೋವಿಡ್‌ಗೆ ನಾಲ್ಕು ಮಂದಿ ಬಲಿ; 269 ಮಂದಿಗೆ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 269 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 239 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಶನಿವಾರ ನಾಲ್ಕು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 98,208ಕ್ಕೆ ಏರಿಕೆಯಾಗಿದೆ. ಈ ಪೈಕಿ 2,105 ಸಕ್ರಿಯ ಪ್ರಕರಣಗಳು. 94,711 ಸೋಂಕಿತರು ಗುಣಮುಖರಾಗಿದ್ದಾರೆ. 1,392 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಶನಿವಾರ ಕಪ್ಪು ಶಿಲೀಂಧ್ರ ಸೋಂಕಿನ ಯಾವುದೇ ಹೊಸ ಪ್ರಕರಣ, ಸಾವು ವರದಿಯಾಗಿಲ್ಲ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ನ 23 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇದುವರೆಗೆ 81,651 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 99,40,717 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.
Next Story





