ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಗಂಗೊಳ್ಳಿ, ಜು.24: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.23ರಂದು ಸಂಜೆ ವೇಳೆ ತ್ರಾಸಿ ಬೀಚ್ ಬಳಿ ಸನ್ಲೈಟ್ ಲಾಡ್ಜ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ತ್ರಾಸಿ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಕಾರು, ರಾ.ಹೆದ್ದಾರಿಯಲ್ಲಿ ನಾವುಂದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಸದಾನಂದ ಕಿಣಿ ಎಂಬವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story