ವಿದ್ಯಾರ್ಥಿಗಳಲ್ಲಿ ಜ್ಞಾನದ ಜತೆಗೆ ಮೌನವೀಯ ಮೌಲ್ಯಗಳನ್ನು ಬೆಳೆಸಿ: ಸಚಿವ ಸುರೇಶ್‍ಕುಮಾರ್

ಬೆಂಗಳೂರು, ಜು. 25: `ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಜ್ಞಾನದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು' ಎಂದು ಶಿಕ್ಷಣ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಹೇಳಿದ್ದಾರೆ.
ರವಿವಾರ ರಾಷ್ಟ್ರೋತ್ಥಾನ ಪರಿಷತ್ ಆಯೋಜಿಸಿದ್ದ ಪ್ರಶಿಕ್ಷಣ ಭಾರತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, `ನಾಡಿನ ವಿವಿಧ ರೀತಿಯ ಶಿಕ್ಷಕರು ಪರಿಪೂರ್ಣ ಶಿಕ್ಷಕರಾಗುವುದರ ಜತೆಗೆ ವಿದ್ಯಾರ್ಥಿಗಳಲ್ಲೂ ಮೌನವೀಯ ಮೌಲ್ಯಗಳನ್ನು ಬೆಳೆಸಬೇಕು' ಎಂದು ಹೇಳಿದರು.
`ಶಿಕ್ಷಕರು ವಿದ್ಯಾರ್ಥಿಗಳ ಜ್ಞಾನ ಮಟ್ಟವನ್ನು ಅರಿತು ಮತ್ತಷ್ಟು ಅಭಿವೃದ್ಧಿಪಡಿಸಲು ಪ್ರಯತ್ನಿಸಬೇಕು. ಬದುಕನ್ನು ಅತಂತ್ಯ ಪ್ರೀತಿಯಿಂದ ಸ್ವೀಕರಿಸುವ ಮನೋಭಾವನೆ ಅವರಿಗೆ ಬರುವಂತೆ ಮಾಡಬೇಕು' ಎಂದು ಸುರೇಶ್ ಕುಮಾರ್ ಅವರು ಸಲಹೆ ನೀಡಿದರು.
ಇಂದು ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಐಐಟಿಗೆ ಸೇರುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಈ ಎಲ್ಲದಕ್ಕೂ ಕಾರಣವೇ ಶಿಕ್ಷಕರಾಗಿದ್ದು, ಸರಕಾರ ಕೂಡ ಶಿಕ್ಷಕರಲ್ಲಿ ಶಕ್ತಿ ತುಂಬುವ ಕೆಲಸ ಮಾಡಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೇಂದ್ರೀಯ ಶಿಕ್ಷಣ ಸಲಹಾ ಮಂಡಳಿ ಸದಸ್ಯ ಪ್ರೊ.ಎಂ.ಕೆ.ಶ್ರೀಧರ್, ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷ ಎಂ.ಪಿ.ಕುಮಾರ್, ಜಿ.ಆರ್.ಜಗದೀಶ್ ಉಪಸ್ಥಿತರಿದ್ದರು.





