ಕರ್ನಾಟಕದಲ್ಲೂ ಮಠಾಧೀಶರನ್ನು ಮುಖ್ಯಮಂತ್ರಿ ಮಾಡಬಹುದು: ರುದ್ರಮುನಿ ಸ್ವಾಮೀಜಿ

ಬೆಂಗಳೂರು: ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಬಿ.ಎಸ್.ಯಡಿಯೂರಪ್ಪ ಅವರನ್ನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನದಿಂದ ಕೈಬಿಡಬಾರದೆಂದು ರಾಜ್ಯ ವಿವಿಧ ಮಠಗಳ ಮಠಾಧೀಶರು ಒಕ್ಕೂರಲಿನಿಂದ ಆಗ್ರಹಿಸಿದ್ದಾರೆ.
ರವಿವಾರ ಇಲ್ಲಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ `ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಮಠಾಧೀಶರ ಮಹಾ ಸಮಾವೇಶ'ದಲ್ಲಿ ಪಾಲ್ಗೊಂಡು ಮಾತನಾಡಿದ ರುದ್ರಮುನಿ ಶಿವಾಚಾರ್ಯ, ಮುಷ್ಟೂರು ಮಠದ ಸ್ವಾಮೀಜಿ, ಉತ್ತರ ಪ್ರದೇಶದಲ್ಲಿ ಆದಿತ್ಯನಾಥರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ. ಅದೇ ರೀತಿ, ಕರ್ನಾಟಕದಲ್ಲಿಯೂ ಮಠಾಧೀಶರೊಬ್ಬರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬಹುದು' ಎಂದು ಹೇಳಿದರು.
ಸುಮಾರು 500ಕ್ಕೂ ಅಧಿಕ ಮಠಾಧೀಶರು ಪಾಲ್ಗೊಂಡಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದು ಎಂದು ನಿರ್ಣಯ ಕೈಗೊಂಡರು.
Next Story





