Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಮಳೆ ಕ್ಷೀಣ; ಸಹಜಸ್ಥಿಯತ್ತ...

ಚಿಕ್ಕಮಗಳೂರು: ಮಳೆ ಕ್ಷೀಣ; ಸಹಜಸ್ಥಿಯತ್ತ ಮರಳಿದ ಜನತೆ

ಪರಿಹಾರ ನೀಡಲು ನಿರ್ಲಕ್ಷ್ಯ:ಆರೋಪ

ವಾರ್ತಾಭಾರತಿವಾರ್ತಾಭಾರತಿ25 July 2021 8:34 PM IST
share
ಚಿಕ್ಕಮಗಳೂರು: ಮಳೆ ಕ್ಷೀಣ; ಸಹಜಸ್ಥಿಯತ್ತ ಮರಳಿದ ಜನತೆ

ಚಿಕ್ಕಮಗಳೂರು, ಜು.25: ಕಾಫಿನಾಡಿನಲ್ಲಿ ಕಳೆದೊಂದು ವಾರದಿಂದ ಎಡಬಿಡದೇ ಸುರಿದ ಭಾರೀ ಮಳೆ ರವಿವಾರ ಕ್ಷೀಣಗೊಂಡಿದ್ದು, ಅಸ್ತವ್ಯಸ್ತಗೊಂಡಿದ್ದ ಜನಜೀವನ ಸಹಜಸ್ಥಿತಿಯತ್ತ ಮರಳಿದೆ. ಮಲೆನಾಡು ಹಾಗೂ ಬಯಲು ಭಾಗದ ತಾಲೂಕುಗಳ ವ್ಯಾಪ್ತಿಯಲ್ಲಿ ಆಗಾಗ್ಗೆ ಸಾಧಾರಣ ಮಳೆಯಾಗಿದ್ದು, ಉಳಿದಂತೆ ಬಿಸಿಲಿನ ವಾತಾವರಣ ಇತ್ತು. ಮಳೆ ಬಿಡುವು ನೀಡಿದ್ದರಿಂದ ರೈತರು ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.

ಜಿಲ್ಲೆಯ ಮಲೆನಾಡು ಹಾಗೂ ಬಯಲು ಭಾಗದ ತಾಲೂಕುಗಳ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಮುಂಗಾರು ಮಳೆಯ ಆರ್ಭಟ ಇತ್ತು. ಕಳೆದೊಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ಭದ್ರಾ, ತುಂಗಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿದ ಪರಿಣಾಮ ನದಿಗಳ ನೆರೆ ನೀರು ಹೊಲ ಗದ್ದೆಗಳಿಗೆ ನುಗಿ ಜಲಾವೃತಗೊಂಡು ಅಪಾರ ನಷ್ಟ ಸಂಭವಿಸಿತ್ತು. ಹಲವು ಗ್ರಾಮಗಳು ಸಂಪರ್ಕ ಕಡಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿತ್ತು. ಅಲ್ಲಲ್ಲಿ ಮನೆಗಳು ಧರೆಗುರುಳಿದ್ದವು. ನಿರಂತರ ಮಳೆಯಿಂದ ರೋಸಿ ಹೋಗಿದ್ದ ಕಾಫಿನಾಡಿನ ಜನರು ಸದ್ಯ ಮಳೆ ಕ್ಷೀಣಿಸಿರುವ ಪರಿಣಾಮ ನಿಟ್ಟುಸಿರು ಬಿಟ್ಟಿದ್ದಾರೆ.

ಮೂಡಿಗೆರೆ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ಕಳಸ ತಾಲೂಕುಗಳಲ್ಲಿ ರವಿವಾರ ಬೆಳಗ್ಗೆ ಸಾಧಾರಣವಾಗಿ ಸುರಿದ ಮಳೆ ಸಂಜೆವರೆಗೂ ಬಿಡುವು ನೀಡಿದ್ದು, ಆಗಾಗ್ಗೆ ಬಿಸಿಲು ಸಹಿತ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲಿ ಬೆಳಗ್ಗೆ ಕೆಲ ಹೊತ್ತು ತುಂತುರು ಮಳೆಯಾಗಿದ್ದು, ಉಳಿದಂತೆ ಬಿಸಿಲಿನ ವಾತಾವರಣ ನಿರ್ಮಾಣವಾಗಿತ್ತು. ಕಡೂರು, ತರೀಕೆರೆ ತಾಲೂಕು ವ್ಯಾಪ್ತಿಯಲ್ಲಿ ಆಗಾಗ್ಗೆ ಸಾಧಾರಣ ಮಳೆ ಸೇರಿದಂತೆ ಬಿಸಿಲಿನ ವಾತಾವರಣ ಇತ್ತು.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಮುಂದುವರಿದಿದ್ದು, ಶಿರಾಡಿ ಘಾಟ್‍ನಲ್ಲಿ ವಾಹನಗಳ ಸಂಚಾರ ನಿಷೇದಿಸಿರುವುದರಿಂದ ದಕ್ಷಿಣ ಕನ್ನಡದತ್ತ ಸಂಚರಿಸುವ ವಾಹನಗಳು ಚಾರ್ಮಾಡಿ ಘಾಟ್‍ನಲ್ಲಿ ಸಂಚರಿಸುತ್ತಿರುವುದರಿಂದ ಘಾಟಿಯಲ್ಲಿ ವಾಹನಗಳ ಧಟ್ಟಣೆ ಹೆಚ್ಚಾಗಿದ್ದು, ಅಲ್ಲಲ್ಲಿ ಟ್ರಾಫಿಕ್ ಜಾಮ್ ಸಾಮಾನ್ಯವಾಗಿದೆ. ಚಾರ್ಮಾಡಿ ಘಾಟ್‍ನಲ್ಲಿ ಕೆಲವೆಡೆ ಭೂ ಕುಸಿತ ಸಂಭವಿಸಿರುವುದರಿಂದ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಸದ್ಯ ಮಲೆನಾಡಿನಲ್ಲಿ ಮಳೆ ಬಿಡುವು ನೀಡಿರುವುದರಿಂದ ಭತ್ತದ ಗದ್ದೆಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿದೆ. ಕಾಫಿ, ಅಡಿಕೆ ತೋಟಗಳಲ್ಲೂ ಗೊಬ್ಬರ, ದ್ರಾವಣ ಸಿಂಪಡಣೆಯಂತಹ ಕೃಷಿ ಕೆಲಸಗಳು ಬಿರುಸಿನಿಂದ ನಡೆಯುತ್ತಿವೆ.

ನಾಟಿ ಮಾಡಿದ್ದ ಭತ್ತ ಗದ್ದೆಗಳಲ್ಲಿ ಮರಳಿನ ರಾಶಿ; ಅಪಾರ ನಷ್ಟ

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಳೆದೊಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ಹೇಮಾವತಿ ಸೇರಿದಂತೆ ಹಳ್ಳಕೊಳ್ಳಗಳು ತುಂಬಿ ಹರಿದು, ನದಿಗಳ ನೆರೆ ನೀರು ಅಕ್ಕಪಕ್ಕದ ಭತ್ತದ ಗದ್ದೆಗಳಿಗೆ ಹರಿದು ಜಲಾವೃತಗೊಂಡಿದ್ದವು. ಪರಿಣಾಮ ನದಿಗಳ ಮರಳು ಭತ್ತದ ಗದ್ದೆಗಳಲ್ಲಿ ಸಂಗ್ರಹವಾಗಿದ್ದು, ನಾಟಿ ಮಾಡಿದ್ದ ಗದ್ದೆಗಳಲ್ಲಿ ಭತ್ತದ ಸಸಿಗಳ ಬದಲಾಗಿ ಮರಳಿನ ರಾಶಿ ಸಂಗ್ರಹವಾಗಿದೆ. ತಾಲೂಕಿನ ಭೈರಾಪುರ, ಹೊಸಕೆರೆ, ಊರುಬಗೆ ಗ್ರಾಮಗಳಲ್ಲಿ ನೂರಾರು ಎಕರೆ ಭತ್ತದ ಗದ್ದೆಗಳನ್ನು ನಾಟಿ ಮಾಡಿದ್ದು, ನಾಟಿ ಮಾಡಿದ್ದ ಗದ್ದೆಗಳಲ್ಲೀಗ ಮರಳಿನ ರಾಶಿ ಮಾತ್ರ ಉಳಿದಿದ್ದು, ಭತ್ತದ ಗದ್ದೆಗಳ ಮಾಲಕರು ಲಕ್ಷಾಂತರ ರೂ. ಖರ್ಚು ಮಾಡಿ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕೆಂದು ಹೊಸಕೆರೆ ಗ್ರಾಮದ ರೈತ ಲಿಂಗಪ್ಪ ಸೇರಿದಂತೆ ಇತರ ಸಂತ್ರಸ್ಥರು ಆಗ್ರಹಿಸಿದ್ದಾರೆ.

ಸಂಪೂರ್ಣವಾಗಿ ಕುಸಿದ ಮನೆ: ಪರಿಹಾರ ನೀಡಲು ನಿರ್ಲಕ್ಷ್ಯ; ದಂಪತಿ ಕಣ್ಣೀರು

ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ಜಗನ್ನಾಥ್ ಹಾಗೂ ಸೀತಮ್ಮ ದಂಪತಿ ವಾಸವಿದ್ದ ಮನೆಯೊಂದು ಕಳೆದ ಭಾರಿ ಸಂಭವಿಸಿದ ಅತಿವೃಷ್ಟಿಗೆ ಭಾಗಶಃ ಹಾನಿಯಾಗಿತ್ತು. ಈ ಮನೆಗೆ ಕಳೆದ ಬಾರಿ ಸರಕಾರ 50 ಸಾವಿರ ರೂ. ಮಾತ್ರ ಪರಿಹಾರ ನೀಡಲಾಗಿದೆ.

ಹಾನಿಯಾದ ಮನೆ ವಾಸಯೋಗ್ಯವಾಗಿಲ್ಲದ ಪರಿಣಾಮ ದಂಪತಿ ಮನೆ ಸಮೀಪದಲ್ಲಿ ಸಣ್ಣ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿದ್ದು, ಹಾನಿಯಾದ ಮನೆ ದುರಸ್ತಿಗೆ ಸರಕಾರ ನೀಡಿದ್ದ ಹಣದಲ್ಲಿ ಇಟ್ಟಿಗೆ ಖರೀದಿಸಿದ್ದರು. ಸದ್ಯ ಸುರಿದ ಮಳೆಗೆ ಭಾಗಶಃ ಹಾನಿಯಾಗಿದ್ದ ಮನೆ ಸಂಪೂರ್ಣವಾಗಿ ಕುಸಿದಿದ್ದು, ಕಂದಾಯಾಧಿಕಾರಿಗಳು ಈ ಮನೆಗೆ ಹಿಂದೆಯೇ 50 ಸಾವಿರ ರೂ. ಪರಿಹಾರ ನೀಡಿರುವುದರಿಂದ ಮತ್ತೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಸರಕಾರ ನೀಡಿದ್ದ 50 ಸಾವಿರ ರೂ. ಹಣದಲ್ಲಿ ಹೊಸ ಮನೆ ನಿರ್ಮಿಸಿಕೊಳ್ಳುವುದು ಹೇಗೆ ಎಂದು ಜಗನ್ನಾಥ್ ಹಾಗೂ ಸೀತಮ್ಮ ಅಳಲು ತೋಡಿಕೊಂಡಿದ್ದು, ಹೊಸ ಮನೆ ನಿರ್ಮಾಣಕ್ಕೆ ಸೂಕ್ತ ಪರಿಹಾರ ಕೊಡಿಸಿ ಎಂದು ಕಣ್ಣೀರಿಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X