Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜುಲೈ 26 ರಿಂದ ಪದವಿ ಕಾಲೇಜು ಆರಂಭ:...

ಜುಲೈ 26 ರಿಂದ ಪದವಿ ಕಾಲೇಜು ಆರಂಭ: ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ;ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ

`ಈವರೆಗೆ ಶೇ.74ರಷ್ಟು ವಿದ್ಯಾರ್ಥಿಗಳಿಗೆ ಲಸಿಕೀಕರಣ'

ವಾರ್ತಾಭಾರತಿವಾರ್ತಾಭಾರತಿ25 July 2021 9:59 PM IST
share
ಜುಲೈ 26 ರಿಂದ ಪದವಿ ಕಾಲೇಜು ಆರಂಭ: ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ;ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ

ಬೆಂಗಳೂರು, ಜು. 25: `ಕೋವಿಡ್-19 ಎರಡನೆ ಅಲೆಯ ಲಾಕ್‍ಡೌನ್ ತೆರವುಗೊಳಿಸಿದ ಹಿನ್ನೆಲೆಯಲ್ಲಿ ನಾಳೆಯಿಂದ (ಜು.26) ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು' ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೂಚಿಸಿದ್ದಾರೆ. 

ರವಿವಾರ ಈ ಬಗ್ಗೆ ಹೇಳಿಕೆ ನೀಡಿರುವ ಅವರು, `ನೇರ ತರಗತಿಗಳಿಗೆ ಹಾಜರಾಗಲಿಚ್ಛಿಸುವ ಪ್ರತಿ ವಿದ್ಯಾರ್ಥಿಯೂ ಮೊದಲ ಡೋಸ್ ಲಸಿಕೆ ಪಡೆಯುವುದು ಕಡ್ಡಾಯ. ಈಗಾಗಲೇ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಸ್ಪಷ್ಟ ಮಾರ್ಗಸೂಚಿ ಜಾರಿ ಮಾಡಿದ್ದು, ಅದನ್ನು ಎಲ್ಲ ವಿಶ್ವವಿದ್ಯಾಲಯಗಳ ಅಡಿಯಲ್ಲಿರುವ ಕಾಲೇಜುಗಳು ಚಾಚೂತಪ್ಪದೇ ಪಾಲಿಸಬೇಕು. ಈ ಬಗ್ಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ' ಎಂದು ಹೇಳಿದ್ದಾರೆ. 

ಕೋವಿಡ್ ಮಾರ್ಗಸೂಚಿಯ ಪ್ರಾಥಮಿಕ ಶಿಷ್ಠಾಚಾರದಂತೆ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯವಾಗಿ ಮಾಡಲೇಬೇಕು. ನಿತ್ಯವೂ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ಅಲ್ಲದೆ, ವಿದ್ಯಾರ್ಥಿಗಳ ಲಸೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದು ಆದಷ್ಟು ಬೇಗ ಎಲ್ಲರಿಗೂ ಲಸಿಕೆ ಸಿಗುವಂತೆ ಕ್ರಮ ವಹಿಸಬೇಕು ಎಂದು ಎಲ್ಲ ಕುಲಪತಿಗಳಿಗೆ ಸೂಚನೆ ಕೊಡಲಾಗಿದೆ' ಎಂದು ಅವರು ತಿಳಿಸಿದ್ದಾರೆ. 

`ನೇರ ತರಗತಿಗಳಿಗೆ ಹಾಜರಾಗುವ ಆಯ್ಕೆ ವಿದ್ಯಾರ್ಥಿಗಳಿಗೆ ಬಿಡಲಾಗಿದೆ. ಅವರು ಇಚ್ಛೆ ಇದ್ದರೆ ಭೌತಿಕ ತರಗತಿಗಳಿಗೆ ಹಾಜರಾಗಬಹುದು, ಇಲ್ಲವೇ ಆನ್‍ಲೈನ್ ಮೂಲಕವೂ ಕಲಿಯಬಹುದು. ಆದರೆ, ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯ' ಎಂದು ಅವರು ತಿಳಿಸಿದ್ದಾರೆ. 
ಶೇ.74ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ: `ರಾಜ್ಯದ ಎಲ್ಲ ವಿವಿಗಳ ವ್ಯಾಪ್ತಿಗಳಲ್ಲೂ ಲಸಿಕೀಕರಣ ವೇಗವಾಗಿ ನಡೆಯುತ್ತಿದ್ದು, ಈವರೆಗೆ 74% ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಉಳಿದ ಎಲ್ಲ ವಿದ್ಯಾರ್ಥಿಗಳಿಗೂ ಆದ್ಯತೆಯ ಮೇರೆಗೆ ವ್ಯಾಕ್ಸಿನ್ ಕೊಡಲಾಗುವುದು' ಎಂದು ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ. 

`ಕೆಲ ವಿಶ್ವವಿದ್ಯಾಲಯಗಳಲ್ಲಿ ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಲಸಿಕೀಕರಣ ನಡೆದಿದೆ. ಇನ್ನು ಕೆಲ ವಿವಿಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಈ ಬಗ್ಗೆ ಕ್ರಮ ವಹಿಸಲು ಆಯಾ ವಿವಿಗಳ ಕುಲಪತಿಗಳಿಗೆ ತಿಳಿಸಲಾಗಿದೆ' ಎಂದು ಡಿಸಿಎಂ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X