Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂಡಿಯಾನ ಆಸ್ಪತ್ರೆಯಿಂದ ಅಪರೂಪದ ಮರು...

ಇಂಡಿಯಾನ ಆಸ್ಪತ್ರೆಯಿಂದ ಅಪರೂಪದ ಮರು ಬೈಪಾಸ್ ಶಸ್ತ್ರ ಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ26 July 2021 3:50 PM IST
share
ಇಂಡಿಯಾನ ಆಸ್ಪತ್ರೆಯಿಂದ ಅಪರೂಪದ ಮರು ಬೈಪಾಸ್ ಶಸ್ತ್ರ ಚಿಕಿತ್ಸೆ

ಮಂಗಳೂರು, ಜು.26: ಈ ಹಿಂದೆ ಬೈಪಾಸ್ ಸೇರಿದಂತೆ ನಾಲ್ಕು ಬಾರಿ ಹೃದಯ ಶಸ್ತ್ರಚಿಕಿತ್ಸೆಗೊಳಪಟ್ಟಿದ್ದ ರೋಗಿಯೊಬ್ಬರಿಗೆ ಇಂಡಿಯಾನ ಆಸ್ಪತ್ರೆ ಮರು ಬೈಪಾಸ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.

ಕೇರಳದ ತ್ರಿಚೂರ್‌ನ 55ರ ಹರೆಯದ ಉಮರ್ ಎಂಬವರಿಗೆ ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಬೀಟಿಂಗ್ ಹಾರ್ಟ್ ಸರ್ಜರಿ (ಹೃದಯದ ಬಡಿತವನ್ನು ನಿಲ್ಲಿಸದೆ) ವಿಧಾನದ ಮೂಲಕ ಹೃದ್ರೋಗ ತಜ್ಞ ಡಾ. ಎಂ.ಕೆ. ಮೂಸಾ ಕುಂಞಿ ನೇತೃತ್ವದಲ್ಲಿ ಈ ಅಪರೂಪದ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಯಿತು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಹೃದಯ ಶಸ್ತ್ರ ಚಿಕಿತ್ಸೆ ಮತ್ತು ಹೃದಯ ಕಸಿ ಕೇಂದ್ರವಾದ ಇಂಡಿಯಾನ ಆಸ್ಪತ್ರೆಯಲ್ಲಿ ನಡೆಸಲಾದ ಈ ಅಪರೂಪದ ಶಸ್ತ್ರ ಚಿಕಿತ್ಸೆ ಮಂಗಳೂರು ಮತ್ತು ದಕ್ಷಿಣ ಭಾರತದಲ್ಲಿಯೇ ಮೊದಲನೆಯದಾಗಿದೆ. ರೋಗಿಯು 15 ವರ್ಷಗಳ ಹಿಂದೆ ಎದೆ ನೋವನ್ನು ಮೊದಲು ಅನುಭವಿಸಿ ಹೃದಯದಲ್ಲಿ ಅನೇಕ ಬ್ಲಾಕ್‌ಗೆ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರು. ಏಳು ವರ್ಷಗಳ ಹಿಂದೆ ಮತ್ತೆ ಹೊಸ ಬ್ಲಾಕ್‌ಗಳು ಅವರ ಹೃದಯದಲ್ಲಿ ಉಂಟಾಗಿದ್ದು, ಆ ಸಂದರ್ಭ ಬೈಪಾಸ್ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಚೇಚರಿಸಿಕೊಂಡಿದ್ದರು. ನಂತರ ಅವರ ಎದೆಯ ಮೂಳೆ ಗುಣಪಡಿಸುವಿಕೆ ಸಂಬಂಧಿಸಿ ಇನ್ನೂ ಎರಡು ಶಸ್ತ್ರ ಚಿಕಿತ್ಸೆಗಳಿಗೆ ಒಳಗಾಗಿ ಆರೋಗ್ಯವಾಗಿದ್ದರು. ಎರಡು ತಿಂಗಳ ಹಿಂದೆ ಮತ್ತೆ ತೀವ್ರವಾದ ಎದೆ ನೋವು ಮತ್ತು ನಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿದ್ದರು. ವೈದ್ಯಕೀಯ ತಪಾಸಣೆಯ ವೇಳೆ ತೀವ್ರವಾದ ಬ್ಲಾಕ್‌ಗಳ ಬೆಳವಣಿಗೆ ಕಂಡು ಬಂದಿತ್ತು. ಇದು ಅವರ ಹೃದಯ ಸ್ನಾಯುಗಳಿಗೆ ತುಂಬಾ ಕಡಿಮೆ ರಕ್ತ ಹರಿಯುವಂತೆ ಮಾಡಿತ್ತು. ಹೀಗಾಗಿ ಅವರಿಗೆ ಕ್ಲಿಷ್ಟಕರ ಮರು ಬೈಪಾಸ್ ಹೃದಯ ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಲಾಯಿತು.

ಸುಮಾರು ಆರು ಗಂಟೆಗಳ ಶಸ್ತ್ರ ಚಿಕಿತ್ಸೆಯ ಮೂಲಕ ಅವರ ಪುನರಾವರ್ತಿತ ಬ್ಲಾಕ್‌ಗಳನ್ನು ತೆಗೆಯಲಾಯಿತು. ರೋಗಿಯ ಕಾಲುಗಳಿಂದ ತೆಗೆದ ರಕ್ತನಾಳಗಳನ್ನು ಬ್ಲಾಕ್‌ಗಳ ಬೈಪಾಸ್ ಮಾಡಲು ಬಳಸಲಾಯಿತು. ಈಗ ರೋಗಿಯ ಹೃದಯವು ಯಾವುದೇ ಸಂದರ್ಭದಲ್ಲಿ ಆರಾಮವಾಗಿ ಕೆಲಸ ಮಾಡಲು ಸಾಕಷ್ಟು ರಕ್ತವನ್ನು ಪಡೆಯುತ್ತಿದೆ. ಬೀಟಿಂಗ್ ಹಾರ್ಟ್ ಬೈಪಾಸ್ ಶಸ್ತ್ರ ಚಿಕಿತ್ಸೆಯ ಸಮಯದಲ್ಲಿ ಈ ಸ್ನಾಯುವನ್ನು ಕತ್ತರಿಸಲು ಅತ್ಯಂತ ಪರಿಣತಿ ಹಾಗೂ ಶಸ್ತ್ರ ಚಿಕಿತ್ಸಾ ಕೌಶಲ್ಯಗಳು ಅಗತ್ಯವಾಗಿರುತ್ತದೆ. ಆದರೆ ಬೀಟಿಂಗ್ ಹಾರ್ಟ್ ಶಸ್ತ್ರ ಚಿಕಿತ್ಸೆಯಲ್ಲಿ ವ್ಯಾಪಕ ಅನುಭವ ಹೊಂದಿರುವ ಡಾ. ಮೂಸಾ ಕುಂಞಿಯವರು 3 ಸೆ.ಮೀ. ಉದ್ದದ ಮಾಂಸ ಖಂಡವನ್ನು ಕತ್ತರಿಸಿ ಅಪಧಮನಿಯ ಮೇಲಿನ ಒತ್ತಡವನ್ನು ನಿವಾರಿಸಲು ನಿರ್ಧರಿಸಿದರು. ಪ್ರಸಕ್ತ ರೋಗಿಯು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ಸಿದ್ಧರಾಗಿದ್ದಾರೆ ಎಂದು ಡಾ. ಯೂಸುಫ್ ಕುಂಬ್ಳೆ ತಿಳಿಸಿದರು.

ಗೋಷ್ಠಿಯಲ್ಲಿ ಡಾ. ಮೂಸ ಕುಂಞಿ, ಡಾ. ಸಿದ್ಧಾರ್ಥ್, ಡಾ. ಸಚಿನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X