Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವಿವರ...

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವಿವರ ಫಲಕ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ26 July 2021 8:06 PM IST
share
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವಿವರ ಫಲಕ ಕಡ್ಡಾಯ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಜು.26: ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಕಾಯ್ದೆಯಡಿ ನೊಂದಾಯಿತವಾದ ಎಲ್ಲಾ ಆಸ್ಪತ್ರೆ, ಕ್ಲಿನಿಕ್‌ ಗಳು ತಮ್ಮಲ್ಲಿ ದೊರೆಯುವ ವಿವಿಧ ಚಿಕಿತ್ಸೆಗಳು, ಚಿಕಿತ್ಸೆಯ ದರಗಳು, ಚಿಕಿತ್ಸಾ ವಿಧಾನಗಳು (ಅಲೋಪತಿ, ಆಯುರ್ವೇದ ಇತ್ಯಾದಿ), ವೈದ್ಯರ ವಿವರಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಹಾಗೂ ಇದು ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ಸ್ಪಷ್ಟವಾಗಿ ಗೋಚರಿಸುವಂತಿರಬೇಕು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೆ.ಪಿ.ಎಂ.ಇ.ಕಾಯ್ದೆಯಡಿ ನೊಂದಾಯಿತ ಆಸ್ಪತ್ರೆಗಳು ತಮ್ಮ ಅನುಮತಿಯ ನವೀಕರಣಕ್ಕೆ ಬರುವ ಸಂದರ್ಭದಲ್ಲಿ ಕಾಯ್ದೆಯಡಿಯಲ್ಲಿನ ಎಲ್ಲಾ ಷರತ್ತುಗಳನ್ನು ಪೂರೈಸಿರುವ ಕುರಿತು ಪರಿಶೀಲನೆ ನಡೆಸಿದ ಬಳಿಕವೇ ಅನುಮತಿಯನ್ನು ನವೀಕರಿಸಬೇಕು. ಜಿಲ್ಲೆಯಲ್ಲಿ ಯಾವುದೇ ನಕಲಿ ವೈದ್ಯರು ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡದಂತೆ ಪರಿಶೀಲಿಸಬೇಕು. ನವೀಕರಣ ಮಾಡಿಸದ ಆಸ್ಪತ್ರೆಗಳ ಪರವಾನಗಿಯನ್ನು ರದ್ದು ಮಾಡಿ. ಅವರು ಹೊಸದಾಗಿ ಪರವಾನಿಗೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಪರವಾನಗಿ ನೀಡಲು ಕ್ರಮ ಕೈಗೊಳ್ಳಿ. ಖಾಸಗಿ ಆಸ್ಪತ್ರೆಗಳು ಕೆ.ಪಿ.ಎಂ.ಇ. ಕಾಯ್ದೆಯ ಷರತ್ತುಗಳನ್ನು ಪಾಲಿಸುತ್ತಿರುವ ಕುರಿತಂತೆ ಅನಿರೀಕ್ಷಿತ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದ ಕುರಿತಂತೆ ಮಾತನಾಡಿ, ಅನುಪಾತ ಪ್ರಮಾಣ 750ಕ್ಕೂ ಕಡಿಮೆ ಇರುವ ಗ್ರಾಮ ಪಂಚಾಯತ್‌ಗಳನ್ನು ಪಟ್ಟಿ ಮಾಡಿ. ಈ ಗ್ರಾಮಗಳಲ್ಲಿ ಅನುಪಾತದ ವ್ಯತ್ಯಾಸಕ್ಕೆ ಸೂಕ್ತ ಕಾರಣಗಳ ಕುರಿತಂತೆ ಪರಿಶೀಲಿಸಿ. ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ, ಭ್ರೂಣ ಲಿಂಗ ಪತ್ತೆ ಕುರಿತು ಪರಿಶೀಲನೆ ನಡೆಸಿ ಎಂದೂ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀರಾಮರಾವ್, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X