ಆ.1: ಪದಗ್ರಹಣ ಕಾರ್ಯಕ್ರಮ
ಮಂಗಳೂರು, ಜು. 28: ದ.ಕ. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಮತ್ತು ಬ್ಲಾಕ್ ಅಧ್ಯಕ್ಷರಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಆ.1ರಂದು ಬೆಳಗ್ಗೆ 10:30ಕ್ಕೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮಿನಾರಾಯಣ ಅಧ್ಯಕ್ಷತೆ ವಹಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.
Next Story