Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಎಸ್ ವೈ ರಾಜೀನಾಮೆಯಿಂದ ನೊಂದು...

ಬಿಎಸ್ ವೈ ರಾಜೀನಾಮೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ28 July 2021 7:34 PM IST
share
ಬಿಎಸ್ ವೈ ರಾಜೀನಾಮೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸುರೇಶ್ ಕುಮಾರ್

ಬೆಂಗಳೂರು:  ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ  ಸುದ್ದಿ ಕೇಳಿ ಮಾನಸಿಕವಾಗಿ ನೊಂದು  ಆತ್ಮಹತ್ಯೆ ಮಾಡಿಕೊಂಡ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು. 

ಚಾಮರಾಜನಗರ ಜಿಲ್ಲೆಯ ನಿಕಟಪೂರ್ವ ಉಸ್ತುವಾರಿ ಸಚಿವರೂ ಆದ ಸುರೇಶ್ ಕುಮಾರ್,  ಬುಧವಾರ ಮೃತನ ಪೋಷಕರಿಗೆ ಸಾಂತ್ವನ ಹೇಳಿದ ಬಳಿಕ ರವಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಟ್ಟಾ ಅಭಿಮಾನಿಯಾಗಿದ್ದರು. ಹಿಂದಿನ ದಿನ ರಾಜೀನಾಮೆ‌ ಸುದ್ದಿ ಕೇಳಿ ವಿಚಲಿತರಾಗಿದ್ದರೆಂದು ಅವರ ಕುಟುಂಬಸ್ಥರಿಂದ ಅರಿತಿದ್ದೇನೆ. ಯಡಿಯೂರಪ್ಪನವರ ರಾಜಿನಾಮೆಯನ್ನು ಸಹಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಂತಹ ವಿಪರೀತ ಕೃತ್ಯಕ್ಕೆ  ಅವರು ಮುಂದಾಗಬಾರದಾಗಿತ್ತು. ಅವರ ಕುಟುಂಬವನ್ನು  ಅವರು ಅನಾಥರನ್ನಾಗಿಸಿ  ಪೋಷಕರು ಮತ್ತು ಕುಟಂಬದ ಸದಸ್ಯರನ್ನು ತೀವ್ರ ಸಂಕಷ್ಟಕ್ಕೆ ಈಡು ಮಾಡುವ ನಿರ್ಧಾರವನ್ನು ಅವರು ತೆಗೆದುಕೊಳ್ಳಬಾರದಿತ್ತೆಂದು ವಿಷಾದ ವ್ಯಕ್ತಪಡಿಸಿದರು. 

ಸುರೇಶ್ ಕುಮಾರ್ ಅವರು ಇಂದು ನೂತನ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು ರಾಜಭವನದಿಂದ ನೇರವಾಗಿ ಬೊಮ್ಮಾಲಪುರಕ್ಕೆ ಆಗಮಿಸಿದರು.  ಮೃತ ರವಿಯವರ ಮನೆಗೆ ಭೇಟಿ ನೀಡಿ ಅವರ ತಾಯಿಯೊಂದಿಗೆ ಕುಳಿತು ಸುದೀರ್ಘವಾಗಿ ಮಾತನಾಡಿದರು. 

ಯಾವುದೇ ಅಭಿಮಾನಿಗಳಾಗಿರಲಿ, ಪಕ್ಷದ ಕಾರ್ಯಕರ್ತರಾಗಿರಲಿ, ಯಾರೇ ಆಗಿರಲಿ ಆತ್ಮಹತ್ಯೆಯಂತಹ ಕೃತ್ಯಕ್ಕೆ ಕೈಹಾಕಬಾರದು. ಜೀವನದಲ್ಲಿ ಇಂತಹ ಹಲವಾರು ಘಟನೆಗಳು, ಕಷ್ಟನಷ್ಟಗಳು  ಬರುತ್ತವೆ. ಎಲ್ಲವನ್ನೂ ಸಮಾಧಾನದಿಂದ ಎದುರಿಸಬೇಕೆಂದು ಅವರು ಹೇಳಿದರು. 

ರವಿಯವರು ತಮ್ಮ ರಾಜಿನಾಮೆ ಸುದ್ದಿ ಕೇಳಿ ಆತ್ಮಹತ್ಯೆಗೆ ಮುಂದಾಗಿದ್ದನ್ನು ತಿಳಿದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೂ ಸಹ ತೀವ್ರ ನೊಂದುಕೊಂಡಿದ್ದಾರೆಂದು ಸುರೇಶ್  ಕುಮಾರ್ ಹೇಳಿದರು. 

ತಮ್ಮ ಅಭಿಮಾನಿ ಆತ್ಮಹತ್ಯೆ ರವಿಯವರ ಆತ್ಮಹತ್ಯೆ ಸುದ್ದಿ ತಿಳಿದ ಬಿ.ಎಸ್. ಯಡಿಯೂರಪ್ಪನವರೂ ಸಹ ಸೋಮವಾರವೇ ಮೃತನ ಪೋಷಕರೊಂದಿಗೆ ದೂರವಾಣಿ ಮೂಲಕವೇ ಮಾತನಾಡಿ ಸಾಂತ್ವನ  ಹೇಳಿದ್ದರು. ಹಾಗೆಯೇ ಯಾವುದೇ ಕಾರ್ಯಕರ್ತ, ಅಭಿಮಾನಿಗಳು ಸಹ ಇಂತಹ ಕೃತ್ಯಕ್ಕೆ ಮುಂದಾಗಬಾರದೆಂದು ಹೇಳಿದ್ದರಲ್ಲದೇ ಅಭಿಮಾನ ಅತಿರೇಕಕ್ಕೆ ಹೋಗಬಾರದು ಎಂದು ಸಲಹೆ ನೀಡಿದ್ದರು.

ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಶಾಸಕ ಸಿ.ಎಸ್.  ನಿರಂಜನ್ ಕುಮಾರ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X