ಜು.30ಕ್ಕೆ ದಿಲ್ಲಿಗೆ ತೆರಳುವೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜು. 28: `ಸಚಿವ ಸಂಪುಟ ರಚನೆ ಸಂಬಂಧ ಚರ್ಚೆ ಹಾಗೂ ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸಲು ನಾನು ಜು.30ಕ್ಕೆ ಹೊಸದಿಲ್ಲಿಗೆ ತೆರಳಲಿದ್ದೇನೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, `ಜಗದೀಶ್ ಶೆಟ್ಟರ್ ಅವರು ಸಂಪುಟದಿಂದ ಹೊರಗುಲಿಯುವ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹೀಗಾಗಿ ಅವರೊಂದಿಗೆ ಸಮಾಲೋಚನೆ ನಡೆಸುತ್ತೆನೆ. ವರಿಷ್ಟರ ಜತೆ ಸಮಾಲೋಚನೆ ನಡೆಸಿದ ಬಳಿಕ ಸಚಿವ ಸಂಪುಟ ರಚನೆ ಮಾಡಲು ತೀರ್ಮಾನ ಮಾಡಲಾಗುವುದು' ಎಂದು ಸ್ಪಷ್ಟಣೆ ನೀಡಿದರು.
Next Story





