Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ...

ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ಅನಾರೋಗ್ಯ ಕಡಿಮೆ -ಡಾ.ಎನ್. ಕಿಶೋರ್ ಆಳ್ವ

ಅಳಿಕೆಯಲ್ಲಿ ಪತ್ರಕರ್ತರಿಂದ ಸಾಮೂಹಿಕ ನಾಟಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 July 2021 4:26 PM IST
share
ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ಅನಾರೋಗ್ಯ ಕಡಿಮೆ -ಡಾ.ಎನ್. ಕಿಶೋರ್ ಆಳ್ವ

ಮಂಗಳೂರು : ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ಅನಾರೋಗ್ಯದ ಸಮಸ್ಯೆ ಕಡಿಮೆ ಎಂದು  ಖ್ಯಾತ ವೈದ್ಯರು ಮತ್ತು ಬೆಂಗಳೂರಿನ ಎಂ.ಎಸ್.ರಾಮಯ್ಯ ಮೆಡಿಕಲ್ ಕಾಲೇಜಿನ ಪೆಥಾಲಜಿ ವಿಭಾಗದ ಪ್ರೊ. ಡಾ. ನಂದ ಕಿಶೋರ್ ಆಳ್ವ ಮಿತ್ತಳಿಕೆ ತಿಳಿಸಿದ್ದಾರೆ.

ಅಳಿಕೆ ಗ್ರಾಮದ ಮಿತ್ತಳಿಕೆಯ (ಚೆಂಡುಕಳ)  ಗದ್ದೆಯಲ್ಲಿ  ಗುರುವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಮತ್ತು ಮಿತ್ತಳಿಕೆಗುತ್ತು ಕುಟುಂಬಸ್ಥರ ಸಹಕಾರದೊಂದಿಗೆ ಹಮ್ಮಿಕೊಂಡ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ  ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ದರು.

ಕೊರೋನ ಸಂದರ್ಭದಲ್ಲಿ ಹಲವಾರು ಮಂದಿ ಅನಾರೋಗ್ಯ ಪೀಡಿತರಿಗೆ ಚಿಕಿತ್ಸೆ ನೀಡಿದ್ದೇನೆ.ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಸದಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು ರೋಗ ಪೀಡಿತರಾಗಿರುವುದು ಕಡಿಮೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ ಎಂದು ಡಾ.ಕಿಶೋರ್ ಆಳ್ವ ಅಭಿಪ್ರಾಯಪಟ್ಟರು. ಕೃಷಿ ಚಟುವಟಿಕೆಗಳೊಂದಿಗೆ ನಮ್ಮ ಮೂಲ ಸಂಸ್ಕೃತಿ ಬೆಸೆದುಕೊಂಡಿದೆ. ಆ ಕಾರಣ ಸುಶಿಕ್ಷಿತರೂ ಕೃಷಿ ಸಂಸ್ಕೃತಿಯಿಂದ ವಿಮುಖರಾಗಬಾರದು ಎಂದು ಡಾ.ಕಿಶೋರ್ ಆಳ್ವ ಹೇಳಿದರು.

ದ.ಕ.ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಎಚ್.ಜಿ. ಅವರು ನೇಜಿ ನೆಡುವ ಮೂಲಕ ಕಾರ್ಯಕ್ರ‌ಮಕ್ಕೆ ಚಾಲನೆ ನೀಡಿದರು. ಮಿತ್ತಳಿಕೆ ಕುಟುಂಬದ ಹಿರಿಯರಾದ ಸುಗಂಧ ಆರ್. ಸಾಮಾನಿಯವರು ಹಾರೈಸಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ತಾಲೂಕು ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಅಳಿಕೆ ಗ್ರಾ.ಪಂ ಅಧ್ಯಕ್ಷೆ ಸರಸ್ವತಿ ಕೆ., ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು, ಮಿತ್ತಳಿಕೆ ಕುಟುಂಬದ ಹಿರಿಯರಾದ ಸಂಕಪ್ಪ ಶೇಖ, ಸೀತಾರಾಮ ಶೆಟ್ಟಿ, ಡಾ. ಕಿಶೋರ್ ಆಳ್ವ, ದಯಾನಂದ ಆಳ್ವ, ಚಂದ್ರನಾಥ ಆಳ್ವ, ಕನ್ಯಾನ ಪಿಡಿಒ ವಿಜಯಶಂಕರ ಆಳ್ವ, ತಿಮ್ಮಪ್ಪ ಶೆಟ್ಟಿ ಅಳಿಕೆಗುತ್ತು, ರೂಪೇಶ್ ರೈ ಅಳಿಕೆಗುತ್ತು, ಕೇಪು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ರಾಧಾ ಕೃಷ್ಣ ಶೆಟ್ಟಿ ಚೆಲ್ಲಡ್ಕ, ಸದಾಶಿವ ಅಳಿಕೆ, ಸೂರ್ಯವಂಶ ಪ್ರತಿಷ್ಠಾನದ ಪ್ರತಿನಿಧಿ ಡಾ. ಗೋವರ್ಧನ ರಾವ್  ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಸ್ಕರ ರೈ ಕಟ್ಟ ಮತ್ತು ಕೋಶಾಧಿಕಾರಿ ಪುಷ್ಪರಾಜ ಬಿ.ಎನ್. ಕಾರ್ಯಕ್ರಮ ನಿರ್ವಹಿಸಿದರು.

ಪತ್ರಕರ್ತರಿಂದ ನೇಜಿ ನಾಟಿ -ಬೆಳೆದ ಪೈರು ಕೃಷಿ ಕಾರ್ಮಿಕರಿಗೆ :- ಮಿತ್ತಳಿಕೆಯ ಕುಟುಂಬದವರ ಗದ್ದೆಯಲ್ಲಿ ಪತ್ರಕರ್ತರು ಸೇರಿ ಗುರುವಾರ ನಾಟಿ ಮಾಡಿದ ಭತ್ತದ ಪೈರು  ಕಟಾವು ಬಳಿಕ ಅದನ್ನು ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡ ಕೃಷಿಕರಿಗೆ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ವಿತರಣೆ ಮಾಡುವುದಾಗಿ  ಮಿತ್ತಳಿಕೆ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಮಿತ್ತಳಿಕೆ ಕುಟುಂಬದ ಗದ್ದೆಯಲ್ಲಿ ಬೆಳೆದ ಭತ್ತದ  ಫಸಲನ್ನು ಪಡೆದು ಆರ್ಥಿಕವಾಗಿ ಹಿಂದುಳಿದ  ಕುಟುಂಬಗಳಿಗೆ ಅದನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು  ದ.ಕ ಜಿಲ್ಲಾ ಕಾರ್ಯನಿರತ  ಪತ್ರಕರ್ತರ  ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಈ ಸಂದರ್ಭದಲ್ಲಿ ತಿಳಿಸಿದರು.

ಪತ್ರಕರ್ತರು ನೇಜಿ ನೆಟ್ಟು, ಯಂತ್ರದ ಮೂಲಕ ಉಳುಮೆ ಮಾಡುವ ಮೂಲಕ ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X