Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹುಬ್ಬಳ್ಳಿ-ಧಾರವಾಡ ನಗರ ಅಭಿವೃದ್ಧಿಗೆ...

ಹುಬ್ಬಳ್ಳಿ-ಧಾರವಾಡ ನಗರ ಅಭಿವೃದ್ಧಿಗೆ ಪ್ರಾಶಸ್ತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ29 July 2021 5:45 PM IST
share
ಹುಬ್ಬಳ್ಳಿ-ಧಾರವಾಡ ನಗರ ಅಭಿವೃದ್ಧಿಗೆ ಪ್ರಾಶಸ್ತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ, ಜು.29: ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳುವ ಮುನ್ನ ವಿಮಾನ ನಿಲ್ದಾಣದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ ಸ್ನೇಹಿತರ ಬಳಗ ಇಲ್ಲಿದೆ. ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಆಗಮಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಪಕ್ಷ ಹಾಗೂ ಕೇಂದ್ರದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಶೀರ್ವಾದದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ್ದೇನೆ ಎಂದು ಅವರು ಹೇಳಿದರು.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಹಾಗೂ ಅನೇಕ ಶಾಸಕ ಮಿತ್ರರು ಇಲ್ಲಿರುವುದರಿಂದ ಪಕ್ಷ ಇಲ್ಲಿ ಬಲಿಷ್ಠವಾಗಿದೆ. ಪಕ್ಷ ಹಾಗೂ ಪರಿವಾರದ ಹಿರಿಯರೊಂದಿಗೆ ಚರ್ಚೆ ಮಾಡಿ ಅವರ ಸಲಹೆ ಸೂಚನೆಗಳನ್ನು ಅನುಷ್ಠಾನ ಮಾಡಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ನಾಳೆ ಬೆಳಗ್ಗೆ ದಿಲ್ಲಿಗೆ ತೆರಳಿ ಪಕ್ಷದ ಹೈಕಮಾಂಡ್ ನಾಯಕರು, ಪ್ರಧಾನಮಂತ್ರಿಗಳನ್ನು ಭೇಟಿ ಮಾಡುತ್ತೇನೆ. ಮುಂದಿನ ಎರಡು ಮೂರು ದಿನಗಳಲ್ಲಿ ಮತ್ತೆ ದಿಲ್ಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಚಿವ ಸಂಪುಟ ಸೇರದಿರುವ ಕುರಿತು ತಮ್ಮ ಅಭಿಪ್ರಾಯವನ್ನು ಬಹಿರಂಗವಾಗಿ ಹೇಳಿದ್ದಾರೆ. ಅದಾಗ್ಯೂ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಈ ಕುರಿತು ಮಾತನಾಡುತ್ತೇನೆ ಎಂದು ಅವರು ಹೇಳಿದರು.

ರಾಜಕೀಯಕ್ಕೆ ಬರುವ ಮೊದಲಿನಿಂದಲೇ ನಾವಿಬ್ಬರೂ ಸ್ನೇಹಿತರು. ಅವರ ಬಗ್ಗೆ ಅಪಾರವಾದ ಅಭಿಮಾನ, ಪ್ರೀತಿ-ವಿಶ್ವಾಸ ಇದೆ. ಅವರೊಂದಿಗೆ ಮಾತನಾಡಿ ಅವರ ಬಯಕೆಯನ್ನು ತಿಳಿದುಕೊಂಡು ಪಕ್ಷದೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳಕ್ಕೆ ಕ್ರಮ: ಈ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣಾ ನದಿ ನೀರಿನ ಹಂಚಿಕೆ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ಬ್ರಿಜೇಶ್ ಕುಮಾರ್ ಪಟೇಲ್ ಅವರ ನೇತೃತ್ವದಲ್ಲಿ ಟ್ರುಬ್ಯುನಲ್ ರಚಿಸಲಾಯಿತು. ಇದರ ತೀರ್ಪಿನಂತೆ ಕೇಂದ್ರ ಸರಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ಹಂತದಲ್ಲಿ ಆಂಧ್ರಪ್ರದೇಶ ಸರಕಾರ ಸುಪ್ರೀಂಕೋರ್ಟ್ ಮೆಟ್ಟಿಲು ಏರಿತು ಎಂದರು.

ಮಹಾರಾಷ್ಟ್ರ ಹಾಗೂ ಕರ್ನಾಟಕ ಒಟ್ಟಾಗಿ ಇದನ್ನು ಎದುರಿಸುತ್ತಿದ್ದೇವೆ. ಮುಂದಿನ ಒಂದುವರೆ ತಿಂಗಳ ಒಳಗಾಗಿ ಸುಪ್ರೀಂಕೋರ್ಟ್ ತೀರ್ಪು ಬರಬಹುದು. ನಮ್ಮ ಪಾಲಿನ ನೀರಿನ ಬಳಕೆಗೆ ಅನುಮತಿ ದೊರೆಯುವ ನಿರೀಕ್ಷೆಯಿದೆ. ಕೇಂದ್ರ ಸರಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ತಕ್ಷಣ ಪುನರ್ವಸತಿ ಕಾರ್ಯಕ್ರಮ ರೂಪಿಸಿ, ಆಲಮಟ್ಟಿ ಜಲಾಶಯದ ಎತ್ತರವನ್ನು ಏರಿಸಲಾಗುವುದು. ಈ ಬಗ್ಗೆ ಸರಕಾರಕ್ಕೆ ಸ್ಪಷ್ಟತೆಯಿದೆ. ಜಲಾಶಯದ ಎತ್ತರ ಹೆಚ್ಚಳದಿಂದ 13.50 ಲಕ್ಷ ಚದರ ಪ್ರದೇಶ ನೀರಾವರಿಗೆ ಒಳಪಡುವುದು. ಇದಕ್ಕೆ ಪ್ರಾಶಸ್ತ್ಯ ನೀಡಿ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕಾರದ ಅಮೃತ ದೇಸಾಯಿ, ಅರಬೈಲು ಶಿವರಾಮ ಹೆಬ್ಬಾರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲಿಸ್ ಆಯುಕ್ತ ಲಾಭುರಾಮ, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X