Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಪುಟ ವಿಸ್ತರಣೆ ಮುಖ್ಯಮಂತ್ರಿಯ...

ಸಂಪುಟ ವಿಸ್ತರಣೆ ಮುಖ್ಯಮಂತ್ರಿಯ ಪರಮಾಧಿಕಾರ: ಮಾಜಿ ಸಚಿವ ಮುರುಗೇಶ್ ನಿರಾಣಿ

ವಾರ್ತಾಭಾರತಿವಾರ್ತಾಭಾರತಿ29 July 2021 6:04 PM IST
share
ಸಂಪುಟ ವಿಸ್ತರಣೆ ಮುಖ್ಯಮಂತ್ರಿಯ ಪರಮಾಧಿಕಾರ: ಮಾಜಿ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು, ಜು.29: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಗುರುವಾರ ಆರ್.ಟಿ.ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಯನ್ನು ಯಾವಾಗ ಮಾಡಬೇಕು, ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು ಎಂದರು.

ನಿನ್ನೆಯಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಅತ್ಯುತ್ತಮವಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ರೈತರು, ಹಿರಿಯರು, ವಿಧವೆಯರು, ಅಂಗವಿಕಲರಿಗೆ ಆದ್ಯತೆ ನೀಡುವ ನಿರ್ಣಯಗಳನ್ನು ಕೈಗೊಂಡಿರುವುದು ಉತ್ತಮ ನಿರ್ಧಾರ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬಸವರಾಜ ಬೊಮ್ಮಾಯಿ ಅವರ ನಡೆ ಉತ್ತಮವಾಗಿ ಮುಂದುವರೆದಿದೆ. ಇದು ಆಡಳಿತದ ದಿಕ್ಸೂಚಿ ಏನಿರಲಿದೆ ಎಂಬುದನ್ನು ಮೊದಲ ದಿನವೇ ತೋರಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಜನಪರವಾದ ಆಡಳಿತಕ್ಕೆ ಸರಕಾರ ಹೆಚ್ಚು ಒತ್ತು ನೀಡಲಿದೆ ಎಂದು ಮುರುಗೇಶ್ ನಿರಾಣಿ ಹೇಳಿದರು.

ಸಂಪುಟಕ್ಕೆ ಸೇರ್ಪಡೆಯಾಗದಿರಲು ತೀರ್ಮಾನಿಸಿರುವ ಜಗದೀಶ್ ಶೆಟ್ಟರ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಮುರುಗೇಶ್ ನಿರಾಣಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಮ್ಮ ಪಕ್ಷದ ಅತ್ಯಂತ ಹಿರಿಯರು, ಮುಖ್ಯಮಂತ್ರಿ, ಸ್ಪೀಕರ್, ಬಿಜೆಪಿ ರಾಜ್ಯಾಧ್ಯಕ್ಷ ಆಗಿದ್ದವರು. ಅವರು ಯಾವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದು ತನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಶೆಟ್ಟರ್ ಜತೆ ಚರ್ಚೆ ಮಾಡುತ್ತೇನೆ. ಉಳಿದ ಹಿರಿಯರ ನಿರ್ಧಾರದ ಬಗ್ಗೆ ಗೊತ್ತಿಲ್ಲ. ಯಾರು ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೊ ನನಗೆ ಗೊತ್ತಿಲ್ಲ. ಶೆಟ್ಟರ್ ಅವರದ್ದು ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಯಾವುದೇ ಗೊಂದಲ ಸೃಷ್ಟಿಸಲು ಇಚ್ಚಿಸುವುದಿಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X