Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಮೆಡಿಕಲ್ ಕಾಲೇಜ್‌ಗೆ ಆಗ್ರಹಿಸಿ...

ಸರಕಾರಿ ಮೆಡಿಕಲ್ ಕಾಲೇಜ್‌ಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಧರಣಿ

ವಾರ್ತಾಭಾರತಿವಾರ್ತಾಭಾರತಿ29 July 2021 8:58 PM IST
share
ಸರಕಾರಿ ಮೆಡಿಕಲ್ ಕಾಲೇಜ್‌ಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಧರಣಿ

ಮಂಗಳೂರು, ಜು. 29: ದ.ಕ. ಜಿಲ್ಲೆಯ ಜನರ ಬಹುದಿನದ ಬೇಡಿಕೆಯಾಗಿರುವ ಸರಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ನಡೆಸುತ್ತಿರುವ ಜನಾಂದೊಲನದ ಭಾಗವಾಗಿ ಗುರುವಾರ ಬೆಳಗ್ಗೆ ನಗರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿ ನಡೆಸಿದರು.

ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಮಾತನಾಡಿ, ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್‌ನ ಹೋರಾಟ ವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷವಾಗಿದೆ. ಎಲ್ಲ ಸಂಘಟನೆಗಳ ನಾಯಕರು ಈ ಹೋರಾಟಕ್ಕೆ ಕೈಜೋಡಿಸಬೇಕಾಗಿದೆ ಎಂದು ಹೇಳಿದರು.

ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ ಮಾತನಾಡಿ, ಎಂಟು ಶಾಸಕರು, ಏಳು ವಿಧಾನ ಪರಿಷತ್ ಸದಸ್ಯರು, ಓರ್ವ ಲೋಕಸಭಾ ಸದಸ್ಯ, ಇಬ್ಬರು ರಾಜ್ಯ ಸಚಿವರು, ಓರ್ವ ಕೇಂದ್ರ ಸಚಿವೆ ಸೇರಿದಂತೆ ಇಷ್ಟು ಜನರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಆದಾಗ್ಯೂ, ಮೆಡಿಕಲ್ ಕಾಲೇಜು ಇಷ್ಟರವರೆಗೆ ಜಿಲ್ಲೆಗೆ ಸ್ಥಾಪಿಸಲು ಸಾಧ್ಯವಾಗಿಲ್ಲ ಎಂದಾದರೆ ಇದು ಜಿಲ್ಲೆಯ ಜನತೆಗೆ ಮಾಡುವ ಘೋರ ಅನ್ಯಾಯವಾಗಿದೆ ಎಂದು ನುಡಿದರು.

ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ಮಾತನಾಡಿ, ಖಾಸಗಿ ವೈದ್ಯಕೀಯ ಕಾಲೇಜುಗಳ ಅಟ್ಟಹಾಸವನ್ನು ನಿಲ್ಲಿಸಲು ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ಸಂಘಟನೆಯು ಮುಂಚೂಣಿಯಲ್ಲಿದೆ. ಈ ಧರಣಿಯು ಹೋರಾಟದ ಮೊದಲ ಹಂತವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಜನತೆಯನ್ನು ಸೇರಿಸಿ ಬೃಹತ್ ಹೋರಾಟವನ್ನು ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಎಂಬುದು ಸಂವಿಧಾನ ನೀಡಿದ ಮೂಲಭೂತ ಹಕ್ಕಾಗಿದೆ. ಈ ಎರಡರಲ್ಲೂ ಖಾಸಗೀಕರಣ ಸಲ್ಲದು. ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಅತ್ಯಾವಶ್ಯಕವಾಗಿದ್ದು, ಈ ಹೋರಾಟದ ಮುಂದುವರಿಕೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಸಾಮಾಜಿಕ ಹೋರಾಟಗಾರ ಇಸ್ಮತ್ ಫಜೀರ್ ಮಾತನಾಡಿ, ಜಿಲ್ಲೆಯಲ್ಲಿ ವೈದ್ಯಕೀಯ ಸೀಟು ನೀಡುತ್ತಿರುವುದು ಶ್ರೀಮಂತಿಕೆಯ ಆಧಾರದಲ್ಲಿಯೇ ಹೊರತು ಅವರ ಸಾಮರ್ಥ್ಯದ ಆಧಾರದಲ್ಲಿ ಅಲ್ಲ ಎಂಬುದು ವಿಷಾದನೀಯ. ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುವ ಮೂಲಕ ಜಿಲ್ಲೆಯ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಬೇಕಾಗಿದೆ ಎಂದು ಹೇಳಿದರು.

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಮಾತನಾಡಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಮೆಡಿಕಲ್ ಮಾಫಿಯಾಗೆ ಕಡಿವಾಣ ಹಾಕಬೇಕಾದರೆ ದ.ಕ. ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಅವಶ್ಯಕ. ಲಕ್ಷ- ಕೋಟಿ ಶುಲ್ಕ ನೀಡಿ ವೈದ್ಯರಾದ ಜಿಲ್ಲೆಯ ಹಲವಾರು ಖಾಸಗಿ ವೈದ್ಯರು ಆರೋಗ್ಯ ಕ್ಷೇತ್ರವನ್ನು ವ್ಯಾಪಾರೀಕರಣ ಮಾಡದೆ ಮತ್ತೇನು ಮಾಡುವರು? ಎಂದು ಪ್ರಶ್ನಿಸಿದರು.

 ಇನಾಯತ್ ಅಲಿ ಸ್ವಾಗತಿಸಿದರು. ಮುನೀರ್ ಬಜಾಲ್ ವಂದಿಸಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಪ್ರಂಟ್ ಜಿಲ್ಲಾಧ್ಯಕ್ಷರಾದ ಸಿರಾಜ್ ಸುರತ್ಕಲ್, ಜಿಲ್ಲಾ ಮುಖಂಡರಾದ ಶರ್ಫುದ್ದೀನ್ ಬಜ್ಪೆ, ಅನ್ಸಾರ್ ಪುತ್ತೂರು, ಯಾಸೀನ್ ಬೆಳ್ತಂಗಡಿ, ಫಯಾಝ್ ವಿಟ್ಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X