Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಖ್ಯಮಂತ್ರಿ ದೆಹಲಿ ಪ್ರವಾಸ: ಪ್ರಧಾನಿ,...

ಮುಖ್ಯಮಂತ್ರಿ ದೆಹಲಿ ಪ್ರವಾಸ: ಪ್ರಧಾನಿ, ಕೇಂದ್ರ ಸಚಿವರ ಭೇಟಿ

ವಾರ್ತಾಭಾರತಿವಾರ್ತಾಭಾರತಿ30 July 2021 8:58 PM IST
share
ಮುಖ್ಯಮಂತ್ರಿ ದೆಹಲಿ ಪ್ರವಾಸ: ಪ್ರಧಾನಿ, ಕೇಂದ್ರ ಸಚಿವರ ಭೇಟಿ

ಬೆಂಗಳೂರು, ಜುಲೈ 30: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಹಾಗೂ ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿಯವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸುವಂತೆ ಪ್ರಧಾನಿಯವರು ಸಲಹೆ ಮಾಡಿದರು. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಪ್ರಧಾನಮಂತ್ರಿಯವರು ಭರವಸೆ ನೀಡಿದರು.

ಇದಕ್ಕೂ ಮುನ್ನ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಹೊಸದಾಗಿ ಸೃಜನೆಯಾದ ಸಹಕಾರ ಸಚಿವಾಲಯದ ಹೊಣೆ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ರಾಜ್ಯದ ಪ್ರವಾಹ ಪರಿಸ್ಥಿತಿ, ಕೋವಿಡ್ 19 ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಮಾಹಿತಿ ನೀಡಿದರು. ಇದು ಪರೀಕ್ಷೆಯ ಸಮಯವೆಂದ ಗೃಹ ಸಚಿವರಿಗೆ ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವಂತೆ ಹಾಗೂ ಕೃಷ್ಣಾ ಮೇಲ್ದಂಡೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕುರಿತು ಸಹ ಚರ್ಚೆ ನಡೆಸಲಾಯಿತು.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ, ಕೇಂದ್ರ ವಾರ್ತಾ ಮತ್ತು ಪ್ರಸಾರ  ಹಾಗೂ ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಅನುರಾಗ್ ಠಾಕುರ್ ಮೊದಲಾದವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನೂತನ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಈ ಗಣ್ಯರು, ರಾಜ್ಯದ ಅಭಿವೃದ್ದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಮಧ್ಯಾಹ್ನ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಯವರು ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲು ಹಾಗೂ ಕೇಂದ್ರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಹಕಾರ ನೀಡುವಂತೆ ಕೋರಿದರು. ಈ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಂಸದರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ತಿಳಿಸಿದರು. ನಾಡಿನ ನೆಲ, ಜಲದ ರಕ್ಷಣೆಯಲ್ಲಿ ಸಂಸದರು ಸಹಕರಿಸುವಂತೆ ಮನವಿ ಮಾಡಿದರು.

ತಮ್ಮ ದೆಹಲಿ ಭೇಟಿಯ ವಿವರಗಳನ್ನು ಮಾಧ್ಯಮದವರಿಗೆ ನೀಡಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಆರ್ಥಿಕ ಸುಸ್ಥಿರತೆ ಕಾಪಾಡುವುದು, ಪ್ರವಾಹ ಹಾಗೂ ಕೋವಿಡ್ ನಿಯಂತ್ರಣ ಆದ್ಯತೆಯ ವಿಷಯಗಳು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X