Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ...

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಕ್ಷ್ಮಿನಾರಾಯಣ ವಿರುದ್ಧ ಕೋರ್ಟ್‍ನಿಂದ ಜಾಮೀನು ರಹಿತ ಬಂಧನದ ವಾರಂಟ್

ವಾರ್ತಾಭಾರತಿವಾರ್ತಾಭಾರತಿ30 July 2021 10:09 PM IST
share

ಬೆಂಗಳೂರು, ಜು.30: ತಮ್ಮ ಪತ್ನಿಗೆ ಜೀವ ಬೆದರಿಕೆ ಒಡ್ಡಿದ ಆರೋಪ ಸಂಬಂಧ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ, ನಗರದ ಖ್ಯಾತ ಉದ್ಯಮಿ ವಿ.ಲಕ್ಷ್ಮಿನಾರಾಯಣ ಸೇರಿ ನಾಲ್ವರು ಆರೋಪಿಗಳ ವಿರುದ್ಧ ಮುಖ್ಯ ಮೆಟ್ರೊಪಾಲಿಟನ್ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದೆ.

ಸ್ಥಿರಾಸ್ತಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿ.ಲಕ್ಷ್ಮಿನಾರಾಯಣ ಅವರು, ತಮ್ಮ ಪತ್ನಿ ವಿಜಯಲಕ್ಷ್ಮಿ ಅವರನ್ನು ಕೊಲೆ ಮಾಡಿಸಲು ಸಂಚು ರೂಪಿಸಿದ ಆಪಾದನೆ ಹೊತ್ತಿದ್ದಾರೆ. ಪ್ರಕರಣದಲ್ಲಿ ಲಕ್ಷ್ಮಿನಾರಾಯಣ ಅವರ ಪುತ್ರಿ ತೇಜಾವಂತಿ, ಸೋಮಯ್ಯ ಹಾಗೂ ಅಶೋಕ ಅವರನ್ನೂ ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಎಲ್ಲ ಆರೋಪಿಗಳೂ ಸದ್ಯ ತಲೆ ಮರೆಸಿಕೊಂಡಿದ್ದಾರೆ.

ಪ್ರಕರಣವೇನು?: ಜೆ.ಪಿ ನಗರ ಮೂರನೆ ಹಂತದಲ್ಲಿ ವಾಸವಾಗಿರುವ ವಿಜಯಲಕ್ಷ್ಮಿ ಅವರಿಗೆ ಈಗ 63 ವರ್ಷ. ವಿಜಯಲಕ್ಷ್ಮಿ ಮತ್ತು ಲಕ್ಷ್ಮಿನಾರಾಯಣ ದಂಪತಿಗೆ ಮೂವರು ಮಕ್ಕಳಿದ್ದಾರೆ.

ಲಕ್ಷ್ಮಿ ನಾರಾಯಣ ಅವರು ಪರಸ್ತ್ರಿ ಸಂಗದಿಂದ ನನ್ನನ್ನು ತೊರೆಯಲು ಇಚ್ಛಿಸಿದ್ದು ಅದಕ್ಕಾಗಿ ವಿವಾಹ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ವಿಜಯಲಕ್ಷ್ಮಿ ಅವರು 2021ರ ಎಪ್ರಿಲ್ ನಲ್ಲಿ ಜೆ.ಪಿ.ನಗರ ಪೆÇಲೀಸ್ ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ ವಿವರಿಸಿದ್ದಾರೆ.

ಪ್ರಸ್ತುತ ನಾನು ವಾಸಿಸುತ್ತಿರುವ ಮನೆಯನ್ನು ನನ್ನ ಗಂಡ ಲಕ್ಷ್ಮಿನಾರಾಯಣ ಅವರು, ನನ್ನ ಮಗಳಾದ ತೇಜಾವಂತಿ ಹೆಸರಿಗೆ ಗಿಫ್ಟ್ ಡೀಡ್ ಮಾಡಿ ಕೊಟ್ಟಿದ್ದರು. ಈಗ ಈ ಮನೆಯಿಂದ ನನ್ನನ್ನು ಹೊರಹಾಕಲು ಇವರೆಲ್ಲಾ ಸಂಚು ರೂಪಿಸಿದ್ದಾರೆ. ಈ ಸಂಬಂಧ ಎಪ್ರಿಲ್ 21ರಂದು ನನ್ನನ್ನು ಮನೆಯಿಂದ ಹೊರಹಾಕುವ ದುರುದ್ದೇಶದಿಂದ ವಿ.ಲಕ್ಷ್ಮಿನಾರಾಯಣ ಮತ್ತು ಅವರ ಅನುಯಾಯಿಗಳು ಮನೆಯನ್ನು ತಮ್ಮ ಸುಪರ್ದಿಗೆ ಪಡೆಯಲು ಬಲವಂತವಾಗಿ ಯತ್ನಿಸಿದ್ದಾರೆ. 

ನಾನು ಮನೆಯಲ್ಲಿ ಮಲಗಿದ ಸಮಯದಲ್ಲಿ ನನ್ನ ಮನೆಯ ಬೀಗ ಒಡೆದು ಹಾಕಿ ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿರುತ್ತಾರೆ. ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನನಗೆ ಜೀವ ಬೆದರಿಕೆ ಒಡ್ಡಿರುತ್ತಾರೆ ಎಂದು ವಿಜಯಲಕ್ಷ್ಮಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈಗ ನನಗೆ ಪ್ರಾಣ ಭಯ ಇದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಚಾರ್ಜ್ ಶೀಟ್ ಸಲ್ಲಿಕೆ: ಐಪಿಸಿ ಕಲಂ 448, 341, 504 ಮತ್ತು 506ರ ಅನುಸಾರ ಎಫ್ ಐ ಆರ್ ದಾಖಲಿಸಿದ್ದ ಜೆ.ಪಿ ನಗರ ಪೊಲೀಸರು ಪ್ರಕರಣದ ತನಿಖೆ ನಡೆಸಿ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. 
ಆರೋಪಿಗಳ ವಿರುದ್ಧ ಇದೇ 15ರಂದು ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿರುವ ನ್ಯಾಯಾಧೀಶರು, ವಿಚಾರಣೆಯನ್ನು 2021ರ ನವೆಂಬರ್ 26ಕ್ಕೆ ಮುಂದೂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X