Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರತ್ನಗಿರಿಯ ನೆರೆಪೀಡಿತ ಪ್ರದೇಶಗಳಿಗೆ...

ರತ್ನಗಿರಿಯ ನೆರೆಪೀಡಿತ ಪ್ರದೇಶಗಳಿಗೆ ತಂಝೀಮ್ ನಿಯೋಗ ಭೇಟಿ; ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ

ವಾರ್ತಾಭಾರತಿವಾರ್ತಾಭಾರತಿ30 July 2021 11:31 PM IST
share
ರತ್ನಗಿರಿಯ ನೆರೆಪೀಡಿತ ಪ್ರದೇಶಗಳಿಗೆ ತಂಝೀಮ್ ನಿಯೋಗ ಭೇಟಿ; ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ

ಭಟ್ಕಳ, ಜು.30: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮಹಾಡ್, ಚಿಪ್ಲೋನ್ ಮತ್ತು ಖೇಡ್‌ನ ಪ್ರವಾಹಪೀಡಿತ ಪ್ರದೇಶಗಳಿಗೆ ಭಟ್ಕಳದ ಸಾಮಾಜಿಕ ಮತ್ತು ರಾಜಕೀಯ ಸಂಸ್ಥೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್‌ನ ನಿಯೋಗ ಭೇಟಿ ನೀಡಿ ಪರಿಶೀಲಿಸಿದ್ದು, ಪರಿಹಾರ ಕಾರ್ಯಕ್ಕಾಗಿ ಕಾರ್ಯ ಯೋಜನೆ ರೂಪಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಿಯೋಗದ ನೇತೃತ್ವ ವಹಿಸಿದ್ದ ತಂಝೀಮ್ ಉಪಾಧ್ಯಕ್ಷ ಉದ್ಯಮಿ ಅತೀಕುರ್ರಹ್ಮಾನ್ ಮುನೀರಿ, ಜು.27ರಂದು ಮಹಾರಾಷ್ಟ್ರ ನೆರೆಭಾದಿತ ಪ್ರದೇಶಗಳಿಗೆ ಭೇಟಿ ನೀಡಿದ ತಂಝೀಮ್ ನಿಯೋಗವು ಅಲ್ಲಿನ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದ್ದು, ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ಸ್ಥಳೀಯ ಸಂಸ್ಥೆಗಳೊಂದಿಗೆ ಕೈಜೋಡಿಸಿ ನಮ್ಮಿಂದಾದ ಸಹಾಯವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ನಿಯೋಗವು ಕೊಂಕಣ ಪ್ರದೇಶದ ಎಲ್ಲಾ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ ಮತ್ತು ಪರಿಸ್ಥಿತಿಯನ್ನು ಪರಿಶೀಲಿಸಿದೆ. ಇದರ ಸಮಗ್ರ ವರದಿಯನ್ನು ಸಿದ್ಧಗೊಳಿಸಿ, ಪೀಡಿತ ಪ್ರದೇಶಗಳಲ್ಲಿ ಪುನರ್ವಸತಿಗೆ ಸಂಬಂಧಿಸಿದಂತೆ ತಂಝೀಮ್ ಸಂಸ್ಥೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಸಾವಿರಾರು ಕುಟುಂಬಗಳು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಜು.21ರಂದು ಸುರಿದ ಮಳೆಯು ಎಲ್ಲವನ್ನೂ ಸರ್ವ ನಾಶಗೊಳಿಸಿದೆ. ಜೀವನ ಹಾನಿಯೊಂದಿಗೆ ಕೋಟ್ಯಂತರ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಅಲ್ಲಿನ ಅಂಜುಮನ್-ಎ-ದದ್ಮಂರ್ದಾನ್ ಶಿಕ್ಷಣ ಮತ್ತು ಅಭಿವೃದ್ಧಿ ಸಂಸ್ಥೆಯೂ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಸದ್ಯಕ್ಕೆ ಆಹಾರಕ್ಕೆ ಕೊರತೆ ಇಲ್ಲ. ಅಕ್ಕಪಕ್ಕದ ಪ್ರದೇಶದವರು ಆಹಾರದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಆದರೆ, ಮನೆ ಅಂಗಡಿಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದ್ದು, ಅವರಿಗೆ ತೊಡಲು ಬಟ್ಟೆ ಇಲ್ಲವಾಗಿದೆ. ಹೊದ್ದುಕೊಳ್ಳಲು ಹೊದಿಕೆಗೆ, ಗ್ಯಾಸ್ ಒಲೆ, ಆರೋಗ್ಯ, ಇಲೆಕ್ಟ್ರೀಷನ್ ಮತ್ತಿತರ ಮೂಲಭೂತ ವಸ್ತುಗಳ ಅಗತ್ಯವಿದೆ. ಅವುಗಳನ್ನು ತಲುಪಿಸುವ ನಿಟ್ಟಿನಲ್ಲಿ ತಂಝೀಮ್ ಸಂಸ್ಥೆ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಮಾಹಿತಿ ನೀಡಿದರು.

ಬಹುತೇಕ ರಸ್ತೆಬದಿಯ ಅಂಗಡಿ ಮತ್ತು ಮನೆಗಳು ಮಳೆಯಿಂದ ಹಾನಿಗೊಳಗಾದ ಸರಕುಗಳು ಮತ್ತು ಅವಶೇಷಗಳಿಂದ ತುಂಬಿವೆ. ಕೆಸರು ತುಂಬಿದ ರಸ್ತೆಗಳಲ್ಲಿ ಹೆಜ್ಜೆ ಹಾಕುವುದು ಕಷ್ಟಕರವಾಗಿತ್ತು. ಹೆಚ್ಚಿನ ಮನೆಗಳು ಮತ್ತು ಅಂಗಡಿಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ನಿಯೋಗದ ಸದಸ್ಯರು ಮಾಹಿತಿ ನೀಡಿದರು.

ನಿಯೋಗದಲ್ಲಿ ಇನಾಯತುಲ್ಲಾ ಶಾ ಬಾಂದ್ರಿ, ಇಸ್ಮಾಯೀಲ್ ಜುಬಾಪು, ಮೌಲಾನಾ ಎಸ್.ಎಂ.ಇರ್ಫಾನ್ ನದ್ವಿ, ಮೌಲ್ವಿ ಇರ್ಷಾದ್ ಅಲಿ ಆಫ್ರಿಕಾ ನದ್ವಿ, ಜೀಲಾನಿ ಸಿದ್ದೀಕ್, ಸಾದಿಕ್ ಮಟ್ಟಾ, ಯೂನುಸ್ ರುಕ್ನುದ್ದೀನ್, ಮುಬೀನ್ ದಾಮೋದಿ, ಇರ್ಷಾದ್ ಸಿದ್ದೀಕ್, ಫವಾಜ್ ಸುಕ್ರಿ, ಇಕ್ಬಾಲ್ ಸುಹೇಲ್, ಸೈಫುಲ್ಲಾ ಶರೀಫ್ ಬೈದಾ, ಇನಾಯತುಲ್ಲಾ ಮುಲ್ಲಾ ಮತ್ತು ಅಬ್ದುಲ್ ರಝಾಕ್ ಶೇಕ್ ಇದ್ದರು.

ನೆರವಿಗಾಗಿ ಮನವಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಅಂಕೋಲಾ ಸೇರಿದಂತೆ ಕೊಂಕಣ ಪ್ರದೇಶದ ಮಹಾರಾಷ್ಟ್ರ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಪರಿಹಾರ ಕಾರ್ಯಕೈಗೊಳ್ಳಲು ತಂಝೀಮ್ ಸಂಸ್ಥೆ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು, ದಾನಿಗಳು ಮುಂದೆ ಬಂದು ನೆರೆಬಾಧಿತರಿಗೆ ನೆರವಾಗಬೇಕೆಂದು ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X