Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ಮತ್ತು...

ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ: ರಣದೀಪ್ ಸಿಂಗ್ ಸುರ್ಜೇವಾಲ

ವಾರ್ತಾಭಾರತಿವಾರ್ತಾಭಾರತಿ31 July 2021 8:31 PM IST
share
ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ: ರಣದೀಪ್ ಸಿಂಗ್ ಸುರ್ಜೇವಾಲ

ಮೈಸೂರು,ಜು.31: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾದ ಮೇಲೆ ದಾಳಿ ನಡೆಸುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‍ನಲ್ಲಿ ಶನಿವಾರ ಮೈಸೂರು ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರುಗಳ ಸಭೆಯಲ್ಲಿ ಭಾಗವಹಿಸಿದ್ದ ಅವರು ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಜನಸಾಮನ್ಯರ ಮೇಲೆ ಗೌರವವಿಲ್ಲ. ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ.  ಚುನಾವಣಾ ಆಯೋಗ, ಸಿಬಿಐ, ಇಡಿ, ನ್ಯಾಯಾಂಗ ಸೇರಿದಂತೆ ಎಲ್ಲಾ ರಂಗಗಳನ್ನು ತನ್ನ ವಶಕ್ಕೆ ಪಡೆದುಕೊಂಡು ತಮಗೆ ಇಷ್ಟ ಬಂದ ರೀತಿಯಲ್ಲಿ ಹಿಡಿತ ಸಾಧಿಸುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿಯವರು ಭ್ರಷ್ಟಾಚಾರ, ಪಕ್ಷಾಂತರ ಮತ್ತು ನುಸುಳುವಿಕೆ ಮೂಲಕ ಕರ್ನಾಟಕದಲ್ಲಿ ಅಧಿಕಾರ ಹಿಡಿದಿದ್ದಾರೆ. ಬಿ.ಎಸ್.ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಎಸಗಿದ್ದಾರೆ. ಅಧಿಕಾರಕ್ಕಾಗಿ ಯಾವ ರೀತಿಯಲ್ಲಿ ಪಕ್ಷಾಂತರ ಮಾಡಿಸಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಪೆಗಾಸಸ್, ಫೋನ್ ಕದ್ದಾಲಿಕೆ  ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರುಗಳ ಚಲನವಲನಗಳನ್ನು ಗಮನಿಸಿ ಅಧಿಕಾರ ಹಿಡಿದರು ಎಂದು ವಾಗ್ದಾಳಿ ನಡೆಸಿದರು.

ಮೋದಿ, ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರಿಗೆ ಹಿರಿಯರ ಮೇಲೆ ಗೌರವವಿಲ್ಲ, ಮೋದಿ ತಮ್ಮ ಗುರು ಎಂದು ಹೇಳುತ್ತಿದ್ದ ಲಾಲ್ ಕೃಷ್ಣ ಅಡ್ವಾನಿ ಅವರನ್ನು ಮೂಲೆ ಗುಂಪು ಮಾಡಿದರು. ಪಕ್ಷಕ್ಕಾಗಿ ದುಡಿದ ಮುರಳಿ ಮನೋಹರ ಜೋಷಿ, ಕೇಶುಬಾಯಿ ಪಟೇಲ್, ನರೇನ್ ಪಾಂಡ್ಯ, ಯಶವಂತ ಸಿನ್ಹಾ ಸೇರಿದಂತೆ ಅನೇಕ ನಾಯಕರುಗಳನ್ನು ಮೂಲೆ ಗುಂಪು ಮಾಡಿದರು. ಅದೇ ರೀತಿ ರಾಜ್ಯದಲ್ಲಿಯೂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಳಸಿಕೊಂಡು ಬಿಸಾಡಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ನೆರೆ ಹಾವಳಿ ಹೆಚ್ಚಾಗಿದೆ. ಪ್ರಾಣಹಾನಿ ಸಂಭವಿಸಿದೆ. ಸಾವಿರಾರು ಮನೆಗಳು ಜಲಾವೃತಗೊಂಡಿವೆ. ಲಕ್ಷಾಂತರ ಎಕರೆ ಬೆಳೆಗಳು ನಾಶವಾಗಿವೆ. ಆದರೆ ಇದೂವರೆಗೂ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿ ಪರಿಹಾರ ಘೋಷಣೆ ಮಾಡಿಲ್ಲ. ಅದೇ ಗುಜರಾತ್, ಬಿಹಾರಕ್ಕೆ ಭೇಟಿ ನೀಡಿ ಪರಿಹಾರ ಘೋಷಿಸುತ್ತಾರೆ. ಇದರ ಅರ್ಥ ಬಿ.ಎಸ್.ಯಡಿಯೂರಪ್ಪ ಅವರನ್ನು ಮೂಲೆ ಗುಂಪು ಮಾಡುವುದು ಎಂದು ಆರೋಪಿಸಿದರು.

ಕೊರೋನ ಸಂಕಷ್ಟದಲ್ಲಿ ರಾಜ್ಯ ತತ್ತರಿಸಿಹೋಗಿದೆ. ಲಕ್ಷಾಂತರ ಮಂದಿ ಸಾವಿಗೀಡಾಗಿದ್ದಾರೆ. ಜನರಿಗೆ ಬೇಕಾದ ಅಕ್ಸಿಜನ್, ವೆಂಟಿಲೇಟರ್, ರೆಮ್ಡಿಸಿವಿರ್, ಸ್ಟಿರಾಯ್ಡ್ ಸೇರಿದಂತೆ ಅನೇಕ ಸೌಲಭ್ಯಬಳನ್ನು ಒದಗಿಸದೆ ಅಧಿಕಾರಕ್ಕಾಗಿ ಹಾತೊರೆಯುತ್ತಿದ್ದಾರೆ. ಸಂಕಷ್ಟದ ಸಮಯದಲ್ಲಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿ ಎಲ್ಲಿಗೆ ಹೋಗಿದ್ದಾರೆ ಎಂದು ಪ್ರಶ್ನಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಆರ್.ಧ್ರುವನಾರಾಯಣ್, ಸಲೀಂ ಅಹಮದ್, ಮಧು ಯಾಕ್ಷಿಗೌಡ, ಬ್ರಿಜೇಶ್ ಕಾಳಪ್ಪ. ವಿ.ಆರ್.ಸುದರ್ಶನ್, ಐಶ್ವರ್ಯ ಮಹದೇವ್ ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಭೆ: ರಣದೀಪ್ ಸಿಂಗ್ ಸುರ್ಜೇವಾಲ
ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಯಿಂದ ತುಮಕೂರು, ಹುಬ್ಬಳ್ಳಿ, ಮೈಸೂರಿನಲ್ಲಿ ವಿಭಾಗೀಯ ಮಟ್ಟದ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.

ಕಾಂಗ್ರೆಸ್ ಪಕ್ಷ ಎಲ್ಲಾ ಜಾತಿ ಸಮುದಾಯದ ಪಕ್ಷ, ನಾವು ಒಂದು ಜಾತಿಗೆ ಸೀಮಿತರಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಅನ್ನಭಾಗ್ಯದಂತಹ ಮಹತ್ತರ ಯೋಜನೆ ಜಾರಿಗೆ ತಂದರು. ಇದು ಒಂದು ಸಮುದಾಯಕ್ಕೆ ಮೀಸಲಾಯಿತೇ. ಎಲ್ಲಾ ಬಡವರಿಗೂ ಅನುಕೂಲವಾಗಿದೆ. ಇದು ಕಾಂಗ್ರೆಸ್ ಪಕ್ಷ ಕಾರ್ಯಕ್ರಮ ಎಂದು ಹೇಳಿದರು.

ಬಿಜೆಪಿ ಪಕ್ಷದ ರಾಜಕೀಯ ದೌರ್ಬಲ್ಯವನ್ನು ಕಾಂಗ್ರೆಸ್ ಉಪಯೋಗಿಸುವುದಕ್ಕಿಂತ ನಮ್ಮ ಪಕ್ಷವನ್ನು ಸಂಘಟಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಮುಖಂಡರುಗಳ ಅಭಿಪ್ರಾಯ ಸಂಗ್ರಹಿಸಿ ಪಕ್ಷ ಮುನ್ನಡೆಸುವ ಕೆಲಸ ಮಾಡಲಾಗುತ್ತದೆ. ನಮ್ಮಲ್ಲಿನ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X